LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿಸಿಎಂ ಡಿಕೆಶಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದೆ ಪ್ರಿಯಂಕಾ ಜಾರಕಿಹೊಳಿ





ಬೆಂಗಳೂರು: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ  ಡಿ. ಕೆ. ಶಿವಕುಮಾರ್‌  ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.

ಸದಾಶಿವನಗರದಲ್ಲಿರುವ  ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್‌  ಅವರು,  ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‌ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.


ಈ ವೇಳೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ರಾಜಕೀಯದ ಕುರಿತು ಡಿಕೆಶಿ ಪಾಠ ಮಾಡಿದ್ದು, ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧೆಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ  ಕಿವಿಮಾತು ಹೇಳಿದರು.


ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ಮಾಡಿದರು. ಅಲ್ಲದೇ  ಜೊಲ್ಲೆ ಅವರ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಮಾಜಿ‌ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಶಾಸಕ ಶಾಮ ಘಾಟಗೆ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಹಾಗೂ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ