LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಸದ ತುಕಾರಾಂ ಅವಹೇಳನಕಾರಿ ಪದ ಬಳಕೆ   ಬಿಜೆಪಿ ಪ್ರತಿಭಟನೆ

ಬಳ್ಳಾರಿ, ಜೂ.17: ಬಳ್ಳಾರಿ ಹಾಗೂ ವಿಜಯನಗರ ಲೋಕಸಭಾ  ಕ್ಷೇತ್ರದ ಸಂಸದ   ಈ. ತುಕಾರಾಂ ವಿರುದ್ಧ ಜಿಲ್ಲೆಯ ಬಿಜೆಪಿ ನಾಯಕರು ಇಂದು ಮಂಗಳವಾರ  ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ  ಮಾನವ ಸರಪಳಿ ರಚಿಸಿ ತುಕಾರಾಂ  ಪ್ರತಿಕೃತಿ ಧಹಿಸಿ ಅಕ್ರೋಶ ವ್ಯಕ್ತಪಡಿಸದರು.
ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಕಳಪೆ ಆಗಿದೆಂದು ಡಣಾಪುರ ಬಳಿ ವ್ಯಕ್ತಿಯೋರ್ವ ವೀಡಿಯೋ ಮಾಡಿ ಪ್ರಶ್ನೆ ಮಾಡಿದ್ದಕ್ಕಾಗಿ ಆತನಿಗೆ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದರು, ಈ ಅಶ್ಲೀಲ  ಪದಗಳ ಬಳಕೆಯನ್ನು ಖಂಡಿಸಿ   ಈ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಘಟಕ ಪ್ರತಿಭಟನೆಯನ್ನು ನಡೆಸಿ, ಸಮಾಜದ ಒಬ್ಬ ಜವಾಬ್ದಾರಿ ನಾಯಕನಾಗಿರುವ ತುಕಾರಾಂ ಈ ರೀತಿಯ ಪದ ಬಳಕೆ ಮಾಡುವುದು ಸರಿಯಲ್ಲ ಸಾರ್ವಜನಿಕರು ಪ್ರಶ್ನೆ ಮಾಡುವುದೇ ತಪ್ಪು ಎನ್ನುವಂತೆ ಅವರು ನಡೆದುಕೊಂಡಿದ್ದಾರೆ ಅವರ ನಿಂದನೆ ರೀತಿ ಖಂಡನೀಯವಾದದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ ಮಾಡಿ ವೀಡಿಯೋ ಮಾಡಿದ್ದ ಯುವಕನ ಬಗ್ಗೆ ಕಳ್ಳಮುಂಡೆ ಮಕ್ಕಳು ಏನೇನೂ ಮಾಡ್ತಾರೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದಿದ್ದರು. ಅಲ್ಲದೇ ವಿಡಿಯೋ ಮಾಡಿದ ಯುವಕನನ್ನು ಕರೆಸಿ ಬೈದಿದ್ದರಂತೆ ತುಕಾರಾಂ ಅವರು.
ಅದಕ್ಕಾಗಿ ತುಕಾರಾಂ ವಿರುದ್ದ ಘೋಷಣೆಕೂಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮತ್ತು ಅವಾಚ್ಯ ಶಬ್ದ ಬಳಸಿದ ಅವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು.
 ಈ ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಅನಿಲಾಯ್ಡು, ಮಹಿಳಾ ಘಟಕದ ಹಂಪಿ ರಮಣ, ಪುಷ್ಪ ಚಾಂದಿನಿ ಅರುಣಕಾಮಿನಿ ರೂಪಶ್ರೀ   
ರಾಜ್ಯ ಬಿಜೆಪಿ ಕಾರ್ಯದರ್ಶಿ ಕೆ.ಎಸ್.ದಿವಾಕರ್,ಜಿಲ್ಲಾ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್. ಗುರುಲಿಂಗನಗೌಡ, ಮೊದಲಾದವರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ