LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ; 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ

ಬೆಂಗಳೂರು, ಜೂನ್​ 11: ಮುಡಾ ಅಕ್ರಮ ಸೈಟ್​ ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ನಿನ್ನೆ ಇ.ಡಿ 100 ಕೋಟಿ ರೂ ಮೌಲ್ಯದ 92 ನಿವೇಶನಗಳನ್ನು ಮುಟ್ಟುಗೋಲು ಹಾಕಿತ್ತು. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಂದು ಕರ್ನಾಟಕದ ಒಟ್ಟು 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ  ಮಾಡಿದ್ದಾರೆ. ಕೆಲ ಸಂಸದರು, ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ.

ಬಳ್ಳಾರಿಯಲ್ಲಿ 5 ಸ್ಥಳ, ಬೆಂಗಳೂರಿನಲ್ಲಿ 3 ಕಡೆ ಇಡಿ ದಾಳಿ ನಡೆದಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್​.ಗಣೇಶ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಭರತ್ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಮನೆಯಿಂದ 2 ಕಿ.ಮೀ. ದೂರದಲ್ಲಿ ರಸ್ತೆಗೆ ಬ್ಯಾರಿಕೇಡ್ ಅವಳಡಿಕೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಬಗ್ಗೆ ಇಡಿ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ಸಂಸದ ತುಕಾರಾಂ ಕಕ್ಕಾಬಿಕ್ಕಿಯಾಗಿದ್ದಾರೆ. ಬಿ.ನಾಗೇಂದ್ರ ಪಿಎ ಬಳಿ ಸಿಕ್ಕ ಡೈರಿ ಆಧಾರವಾಗಿಟ್ಟುಕೊಂಡು ಪ್ರಶ್ನೆ ಮಾಡಲಾಗಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ.

ಕಂಪ್ಲಿ ಶಾಸಕ ಜೆಎನ್​ ಗಣೇಶ್ ನಿವಾಸ ಮತ್ತು ಕಚೇರಿಯಲ್ಲಿ 10 ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಮಾಡಲಾಗುತ್ತಿದ್ದು, ಹಣ ಹಂಚಿಕೆ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದೇ ರೀತಿಯಾಗಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ರೆಡ್ಡಿ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಇನ್ನು ಈಗಾಗಲೇ ಪ್ರಕರಣದಲ್ಲಿ ಅರೆಸ್ಟ್ ಆಗಿ ಬೇಲ್​ ಪಡೆದಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ನಿವಾಸದ ಮೇಲೆ ಕೂಡ ರೇಡ್ ಮಾಡಲಾಗಿದೆ. ಬಿ.ನಾಗೇಂದ್ರಗೆ ಸೇರಿದ ಬೆಂಗಳೂರಿನಲ್ಲಿ ಶಾಸಕರ ಭವನದ ಕೊಠಡಿ ನಂಬರ್ 360ರಲ್ಲಿ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ತನಿಖೆ ಮುಗಿದಿದೆ ಎನ್ನುವ ಹೊತ್ತಿನಲ್ಲೇ ಮತ್ತೆ ದಾಳಿ ಮಾಡಲಾಗಿದೆ.

ಕಾಂಗ್ರೆಸ್ ಸಂಸದರು,​​ ಶಾಸಕರ ಮನೆಗಳ ಮೇಲೆ ಇಡಿ ದಾಳಿ ವಿಚಾರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಯಾರೇ ಆಗಲಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪುಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್