LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಣೇಶ ನಗರದಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಪುರಸಭೆ ಮುಖ್ಯಾಧಿಕಾರಿ: ನಾಮದೇವ ಲಮಾಣಿ.


ಮಹಾಲಿಂಗಪುರ, ಜೂ. ೨೩: ಮಹಾಲಿಂಗಪುರ ನಗರದ ಗಣೇಶ ನಗರ ಪ್ರದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಹಾಗೂ ಚರಂಡಿ ಸ್ವಚ್ಛತಾ ಕಾಮಗಾರಿಗಳನ್ನು ಪುರಸಭೆಯ ಮುಖ್ಯಾಧಿಕಾರಿ ನಾಮದೇವ ಲಮಾಣಿ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.
ಗಣೇಶ ನಗರದ ೧೫ನೇ ವಾರ್ಡ್‌ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಸ್ವಚ್ಛತಾ ಕಾರ್ಯಗಳ ಪ್ರಗತಿಯನ್ನು ವೀಕ್ಷಿಸಿದ ಅವರು, ಕಾಮಗಾರಿಯ ಗುಣಮಟ್ಟ ಮತ್ತು ಕಾರ್ಯದ ವೇಗದ ಬಗ್ಗೆ ಮಾಹಿತಿ ಪಡೆದು ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ ಸ್ವಚ್ಛತಾ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಿದರು.
ಕಚೇರಿಗೆ ಸೀಮಿತವಾಗದೆ ಕಾರ್ಯ ಸ್ಥಳಕ್ಕೆ ತೆರಳಿ ಕಾರ್ಮಿಕರೊಂದಿಗೆ ಚರ್ಚಿಸಿ ಕೆಲಸದ ಮೇಲ್ವಿಚಾರಣೆ ನಡೆಸಿದ ಮುಖ್ಯಾಧಿಕಾರಿಯ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ತೋರಿಸುತ್ತಿರುವ ಬದ್ಧತೆ ಶ್ಲಾಘನೀಯವಾಗಿದೆ ಎಂದು ಸ್ಥಳೀಯ ನಿವಾಸಿಗಳು ಅಭಿಪ್ರಾಯಪಟ್ಟಿದ್ದಾರೆ.
ಗಣೇಶ ನಗರ ಸೇರಿದಂತೆ ನಗರದ ವಿವಿಧ ವಾರ್ಡ್‌ಗಳಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಪುರಸಭೆ ಆದ್ಯತೆ ನೀಡುತ್ತಿದ್ದು, ಸಾರ್ವಜನಿಕರ ಸಹಕಾರದೊಂದಿಗೆ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಾದ ಲಕ್ಕನ ದೊಡಮನಿ , ಸುರೇಶ ಉತ್ತೂರ, ಆನಂದ ನಡುವಿನಮನಿ, ಆನಂದ ಮಾದರ, ಸುನೀಲ ಉತ್ತೂರ, ಸಮುದಾಯ ಸಂಚಾಲಕರಾದ ಕವಿತಾ ಜಿಡ್ಡಿಮಣಿ, ಉಪಸ್ಥಿತರಿದ್ದರು.
೨೨ mಟಠಿ ೦೩ ಪೋಟೊ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್