LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಸ್ತು ಸಂಗ್ರಹಾಲಯಗಳು ಜ್ಞಾನಾಭಿವೃದ್ಧಿಯ ಸಂಕೇತ

 

ಹಸಿರು ಕ್ರಾಂತಿ ವರದಿ ಚನ್ನಮ್ಮನ ಕಿತ್ತೂರು
ವಸ್ತು ಸಂಗ್ರಹಾಲಯಗಳು ಜ್ಞಾನಾಭಿವೃದ್ಧಿಯ ಸಂಕೇತಗಳಾಗಿವೆ. ವಸ್ತು ಸಂಗ್ರಹಾಲಯದ ಮಹತ್ವ ಹಾಗೂ ಅದರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಕಿತ್ತೂರ ರಾಣಿಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಚನ್ನಮ್ಮನ ಕಿತ್ತೂರು ಸಹಯೋಗದಲ್ಲಿ ಕಿತ್ತೂರ ರಾಣಿಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತುಸಂಗ್ರಹಾಲಯ ಆವರಣದಲ್ಲಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸವನ್ನು ಕೇಳುವುದಕ್ಕಿಂತ ವಸ್ತು ಸಂಗ್ರಹಾಲಯದಲ್ಲಿ ನೋಡಿ ತಿಳಿಯುವುದು ಪರಿಣಾಮಕಾರಿ ಹಾಗೂ ಶಾಶ್ವತ ಕಲಿಕೆಯಾಗುತ್ತದೆ ಎಂದರು.

ವಿಭಜಿತ ಜಗತ್ತನ್ನು ಒಂದುಗೂಡಿಸುವ ವಸ್ತು ಸಂಗ್ರಹಾಲಯಗಳು ವಿಷಯದ ಕುರಿತು ಇತಿಹಾಸ ಪ್ರಾಧ್ಯಾಪಕ ಡಾ.ಸದಾಶಿವ ಮುಗಳಿ  ವಿವರಿಸಿದ ಅವರು, ವಸ್ತು ಸಂಗ್ರಹಾಲಯಗಳ ಹಿನ್ನೆಲೆ, ಬೆಳೆದು ಬಂದ ಬಗೆ ಅವುಗಳ ಅಧ್ಯಯನದ ಮಹತ್ವ, ವಿವಿಧ ತೆರನಾದ ವಸ್ತು ಸಂಗ್ರಹಾಲಯದ ಕುರಿತು ವಿಸ್ತೃತವಾಗಿ ತಿಳಿಸಿ ವಿದ್ಯಾರ್ಥಿಗಳಿಗೆ ವಸ್ತು ಸಂಗ್ರಹಾಲಯದ ಅಧ್ಯಯನದ ಅಗತ್ಯತೆಯನ್ನು ಪ್ರಸ್ತಾಪಿಸಿದರು.

ಕಾರ್ಯಕ್ರಮದಲ್ಲಿ ಕ.ಸಾ.ಪ ಚನ್ನಮ್ಮನ ಕಿತ್ತೂರ ವತಿಯಿಂದ 2025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಕನ್ನಡ ವಿಷಯದಲ್ಲಿ 125/125 ಅಂಕಗಳನ್ನು ಪಡೆದ 40 ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಭಾಷೆ ಕನ್ನಡದಲ್ಲಿ 100/100ಕ್ಕೆ ಅಂಕಗಳನ್ನು ಪಡೆದ 15 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಪುಸ್ತಕ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿ ತಾಲೂಕು ದಂಡಾಧಿಕಾರಿ ಕಲಗೌಡ ಪಾಟೀಲ ಮಾತನಾಡಿ, ನಮ್ಮ ಸ್ಮಾರಕಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಂಪರೆ, ಸ್ಮಾರಕ, ಶಾಸನ ಅಧ್ಯಯನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಸಂಸ್ಥಾನ ಕಲ್ಮಠದ ರಾಜಗುರು ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವದಿಸಿದರು.

ಪೊಲೀಸ್‌ ಇಲಾಖೆಯ ಸಿಪಿಐ ಶಿವಾನಂದ ಗುಡುಗನಟ್ಟಿಯವರು ಸ್ಮಾರಕಗಳ ಅರಿವು ಎಲ್ಲರಿಗೂ ಅವಶ್ಯ ಎಂದು ತಿಳಿಸಿ ಸುಮಧುರವಾಗಿ ನಾಡು, ನುಡಿಯ ಪ್ರತಿಬಿಂಬಿಸುವ ಕನ್ನಡ ಹಾಡನ್ನು ಹಾಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನವರ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಹೊಸಮನಿ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಶಿಕ್ಷಕಿ ವೈಶಾಲಿ ಅಳಗುಂಡಿ ಪ್ರಾರ್ಥಿಸಿದರು. ವಸ್ತು ಸಂಗ್ರಹಾಲಯದ ಕ್ಯೂರೇಟರ್ ರಾಘವೇಂದ್ರರವರು ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯ ಹಿನ್ನೆಲೆ ಮಹತ್ವದ ಬಗ್ಗೆ ಹೇಳುತ್ತ ವಸ್ತು ಸಂಗ್ರಹಾಲಯಗಳು ಜೀವಂತ ಇತಿಹಾಸದ ಪ್ರತೀಕ ಎಂದು ತಿಳಿಸಿದರು. 

ಶಿಕ್ಷಕ ಮಂಜುನಾಥ ಕಳಸಣ್ಣವರ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಷಯದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಮುಖ್ಯೋಪಾಧ್ಯಯ ಬಿ.ಸಿ.ಬಿದರಿ ನಡೆಸಿಕೊಟ್ಟರು. ಶಿಕ್ಷಕ ಎನ್.ಎಂ.ನಂದಿಹಳ್ಳಿ ವಂದಿಸಿದರು. ಮಹೇಶ ಹೊಂಗಲ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಾಜಿ ಗುಡಾಜಿ, ರಾಮಕೃಷ್ಣ ಇಲಕಲ್, ಮಹೇಶ ಚನ್ನಂಗಿ, ಪ್ರಾಚಾರ್ಯ ಪೆಂಟೇದ, ಕ.ಸಾ.ಪ ಸದಸ್ಯ ವಿವೇಕ ಕುರಗುಂದ, ಗಂಗಾಧರ ಹನಮಸಾಗರ, ವಿ.ಎಸ್.ನಂದಿಹಳ್ಳಿ, ನಾಗಯ್ಯ ಹುಲೆಪ್ಪನವರಮಠ, ಮಂಜುನಾಥ ಕರಿಶಿದ್ದನವರ, ಮಹಿಳಾ ಸದಸ್ಯರಾದ ಪ್ರಭಾವತಿ ಲದ್ದಿಮಠ, ಸೌಮ್ಯ ರಾಘವೇಂದ್ರ, ರಾಜೇಶ್ವರಿ ಕಳಸಣ್ಣವರ ಹಾಗೂ ಬೆಳ್ಳಿಚುಕ್ಕಿ ಮಹಿಳಾ ವೇದಿಕೆಯ ಸರ್ವ ಸದಸ್ಯರು ಹಾಜರಿದ್ದರು. ತಾಲೂಕಿನ ಎಲ್ಲ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವರ್ಗದವರು ಹಾಜರಿದ್ದರು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್