LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಇಂದಿನಿಂದ ಸರ್ಕಾರದ ವಿರುದ್ಧ ನನ್ನ ಯುದ್ಧ: ಕುಮಾರಸ್ವಾಮಿ

ಬೆಂಗಳೂರು, (ಏಪ್ರಿಲ್ 05): ಕೇತಗಾಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಸೈಲೆಂಟ್​ ಆಗಿದ್ದ ಮಾಜಿ ಸಿಎಂ, ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ , ಇದೀಗ ಏಕಾಏಕಿ ಸಿಡಿದೆದ್ದಿದ್ದಾರೆ. ಈ ಸಂಬಂಧ ಇಂದು (ಏಪ್ರಿಲ್ 05) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ನನಗೆ ನೊಟೀಸ್ ಕೊಡುವುದು ಇರಲಿ. ಕೆಳಹಂತದ ಅಧಿಕಾರಿಗಳನ್ನ ನಾನು ಪ್ರಶ್ನೆ ಮಾಡಲ್ಲ. ಎಸ್ ಐಟಿ ತಂಡ ರಚಿಸಿ ತನಿಖೆ ಮಾಡಿಸಿದ್ದಾರೆ. ಇದು ಇತಿಹಾಸದಲ್ಲೇ ಪ್ರಥಮ . ಈ ಸರ್ಕಾರಕ್ಕೆ ನಾನು ಸವಾಲು ಹಾಕುವುದಕ್ಕೆ ಬಂದಿದ್ದೇನೆ. ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ ಮಾಡುತ್ತಿದ್ದೇನೆ ಎಂದು ಘೋಷಣೆ ಮಾಡಿದರು. ಈ ಮೂಲಕ ಕುಮಾರಸ್ವಾಮಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.









 

40 ವರ್ಷಗಳ ಹಿಂದೆ ಭೂಮಿ ಖರೀದಿ ಮಾಡಿದ್ದೆ. ೪೦% ವರ್ಷಗಳಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಅಧಿಕಾರಿಗಳನ್ನ ದುರುಪಯೋಗ ಮೂಲಕ ರಾಜಕಾರಣ ನಡೆಯುತ್ತಿದೆ, ಸಿದ್ದರಾಮಯ್ಯ, ಡಿಕೆಶಿ ಅವರು ಇರಬಹುದು. ಇವತ್ತಿಂದ ನನ್ನ ಸರ್ಕಾರ ವಿರುದ್ಧ ವಾರ್ ಆರಂಭ ಮಾಡುತ್ತಿದ್ದೇನೆ. ಇದನ್ನು ನಾಡಿನ ಜನತೆಗೆ ಹೇಳುತ್ತಿದ್ದೇನೆ. ನಾಲ್ಕೈದು ಜೆಸಿಬಿ , 25ರಿಂದ 30 ಅಧಿಕಾರಿಗಳು, ಪೊಲೀಸರು ಬೇರೆ. ಕುಮಾರಸ್ವಾಮಿ ಬೆಂಬಲಿಗರು ದಾಳಿ ಮಾಡುತ್ತಾರೆ ಎಂದು ಪೊಲೀಸರು ಕರೆದುಕೊಂಡು ಬಂದಿದ್ದರು. ಮಾಜಿ ಪ್ರಧಾನಿ ಮಗ ನಾಲ್ಕು ಎಕರೆ ಒತ್ತುವರಿ ಮಾಡೋಕೆ ಆಗುತ್ತೆ. ಸಮಾಜ ಪರಿವರ್ತನೆ ಅಂತೆ. 70 ಎಕರೆ ಒತ್ತುವರಿ ಅಂತೆ ನನ್ನಲ್ಲಿ40 ಎಕರೆ ಮಾತ್ರ ಇದೆ. ಅತಿಕ್ರಮಣ, ಅಕ್ರಮ ಇದ್ರೆ ದಾಖಲೆ ಬಿಡುಗಡೆ ಮಾಡಲಿ. ಈ ಸರ್ಕಾರದಲ್ಲಿರುವವರು ನಾನು ಅಪರಾಧಿ ಎಂದು ಅಪಪ್ರಚಾರ ಮಾಡುವುದಕ್ಕೆ ಹೊರಟ್ಟಿದ್ದಾರೆ. ಇದಕ್ಕೆಲ್ಲ ಕುಮಾರಸ್ವಾಮಿ ಹೆದರಲ್ಲ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ