LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೈಸೂರು ದಸರಾ 2024: ಅಂಬಾರಿ ಮೆರವಣಿಗೆಗೆ ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

 

ಮೈಸೂರು ಆ.21: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ:ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

*ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ*

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್