LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಮೇ: 28: ಹೊಸದಾಗಿ ಸಚಿವ ಸಂಪುಟ ಪುನರ್ರಚನೆಯಾದರೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿಎಂ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ, ಶಾಸಕಾಂಗ ಪಕ್ಷದ ಸಭೆಯ ಬಗ್ಗೆಯೂ ಕರೆ ಬಂದಿಲ್ಲ, ಆದರೆ ಸಿಎಂ ಬದಲಾವಣೆಗೆ ಸಂಬಂಧಿಸಿ ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ ಎಂದರು.
ಸಚಿವ ಸಂಪುಟ ಪುನರ್ರಚನೆ ಅಥವಾ ಸಿಎಂ ಬದಲಾವಣೆ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ತೀರ್ಮಾನವೇ ಅಂತಿಮ, ಅವರು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಸುಬ್ಬರಾಯುಡು, ಮೊಹಮ್ಮದ್ ಭಾಯ್, ಡಿ.ಸೂರಿ, ಬಿಆರೆಲ್ ಸೀನಾ, ಅಲ್ಲಾಬಕಷ್, ಹೊನ್ನಪ್ಪ, ಕಣೇಕಲ್ ಮೆಹಬೂಬಸಾಬ, ಪಾಲಿಕೆಯ ಸದಸ್ಯ ಜಬ್ಬಾರ್ ಮತ್ತಿತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್