LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಿರೂಪಣಾ ಕಾರ್ಯಾಗಾರದ ಆಯೋಜನೆ 

ಸಂಡೂರು. ಜು. 27 : ಮಾತಿನ ಮೂಲಕ ಮನವೊಲಿಸುವ ಕಲೆ ಎಂದರೆ ಪದಗಳು, ಸ್ವರ ಮತ್ತು ದೇಹ ಭಾಷೆಯ ಶಕ್ತಿಯನ್ನು ಬಳಸಿಕೊಂಡು ಇತರರ ಮೇಲೆ ಪ್ರಭಾವ ಬೀರುವ ಮತ್ತು ಸ್ಫೂರ್ತಿ ನೀಡುವ ಸಾಮರ್ಥ್ಯ ಇಂದು ಅತ್ಯಗತ್ಯವಾಗಿದ್ದು ಪ್ರತಿಯೊಬ್ಬರು ಈ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು 
ಸಂಡೂರು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಗದೀಶ್ ಬಸಾಪೂರ ಕರೆ ನೀಡಿದರು.
ಅವರು ಪಟ್ಟಣದ ಗುರುಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮತ್ತು ಬಿ.ಕೆ.ಜಿ. ಸಂಸ್ಥೆಯ ಸಹಯೋಗದಲ್ಲಿ ನಡೆದ  ನಿರೂಪಣೆ, ವೇದಿಕೆ ಕೌಶಲ್ಯಗಳು ಮತ್ತು ಮಾತನಾಡುವ ಕಲೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ 
ಇಂದಿನ ಸ್ಪರ್ಧಾತ್ಮಕ ಹಾಗೂ ಸಂವಹನ ಪ್ರಧಾನ ಯುಗದಲ್ಲಿ ನಿರೂಪಣೆ, ವೇದಿಕೆ ಕೌಶಲ್ಯಗಳು ಮತ್ತು ಮಾತನಾಡುವ ಕಲೆ ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ ಅತ್ಯಂತ ಅಗತ್ಯವಾದ ಕೌಶಲ್ಯಗಳಾಗಿವೆ. ಜ್ಞಾನ, ಪ್ರತಿಭೆ ಮತ್ತು ಸಾಮರ್ಥ್ಯ ಇದ್ದರೂ ಅವುಗಳನ್ನು ಪರಿಣಾಮಕಾರಿಯಾಗಿ ಇತರರಿಗೆ ತಲುಪಿಸುವ ಸಾಮರ್ಥ್ಯವಿಲ್ಲದಿದ್ದರೆ ಯಶಸ್ಸು ಸೀಮಿತವಾಗುತ್ತದೆ. ಆದ್ದರಿಂದ ವ್ಯಕ್ತಿಯ ಆಲೋಚನೆ, ಜ್ಞಾನ ಮತ್ತು ಭಾವನೆಗಳನ್ನು ಸ್ಪಷ್ಟವಾಗಿ, ಸುಂದರವಾಗಿ ಹಾಗೂ ಪರಿಣಾಮಕಾರಿಯಾಗಿ ವ್ಯಕ್ತಪಡಿಸುವ ಈ ಕಲೆಗೆ ವಿಶೇಷ ಮಹತ್ವವಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಲೇಖಕರಾದ ಡಾ. ಸಿ. ಆರ್. ಗೋಪಾಲ್ ಯಾವುದೇ ಕಾರ್ಯಕ್ರಮವನ್ನು ಕ್ರಮಬದ್ಧವಾಗಿ, ಅರ್ಥಪೂರ್ಣವಾಗಿ ಮತ್ತು ಆಕರ್ಷಕವಾಗಿ ನಡೆಸಿಕೊಡುವ ಕಲೆಯೇ ನಿರೂಪಣೆಯಾಗಿದ್ದು, ನಿರೂಪಕ ಕಾರ್ಯಕ್ರಮದ ಸಹಾಯಕನಾಗಿದ್ದು, ಅದರ ಯಶಸ್ಸಿಗೆ ಕಾರಣನಾಗಿರುತ್ತಾನೆ ಎಂದು ತಿಳಿಸಿದರು. 
ಸಂಪನ್ಮೂಲ ವ್ಯಕ್ತಿಗಳಾದ ವಿನೋದ್ ಎಂ. ನಿರೂಪಣೆ, ವೇದಿಕೆ ಕೌಶಲ್ಯಗಳು ಮತ್ತು ಮಾತನಾಡುವ ಕಲೆಗಳು ವ್ಯಕ್ತಿಯ ಯಶಸ್ಸಿನ ಸಾಧನಗಳಾಗಿವೆ ಎಂದು ತಿಳಿಸಿದರು. ಪ್ರಾಯೋಗಿಕವಾಗಿ ಅನೇಕ ವಿಷಯಗಳನ್ನು ಉದಾಹರಣೆ ಸಮೇತ ವಿದ್ಯಾರ್ಥಿಗಳಿಗೆ ತಿಳಿಸಿದರು. 
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ. ನಾಗನಗೌಡ 
ವೇದಿಕೆಯ ಮೇಲೆ ಆತ್ಮವಿಶ್ವಾಸದಿಂದ ನಿಂತು ಮಾತನಾಡುವುದು, ತನ್ನ ವಿಚಾರಗಳನ್ನು ವ್ಯಕ್ತಪಡಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿರುವುದರಿಂದ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬರು ಈ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿ.ಕೆ.ಜಿ. ಸಂಸ್ಥೆಯ ಅಧಿಕಾರಿ ಗೋಪಾಲ್ ಯು., ಅನೇಕ ಸಂಸ್ಥೆಗಳ ಪದಾಧಿಕಾರಿಗಳು, ಕ.ಸಾ.ಪ. ಪದಾಧಿಕಾರಿಗಳು ಸೇರಿದಂತೆ ತಾಲೂಕಿನ ಶಾಲಾ-ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್