LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸುಜಾತಾ ಎಫ್. ಪಾಟೀಲ ಅವರಿಗೆ ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ


ಗದಗ, ಎ. ೧೭ : ಗದುಗಿನ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ವೃತ್ತಿಪರ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಶ್ರೀಮತಿ ಸುಜಾತಾ ಫಕೀರಗೌಡ ಪಾಟೀಲ ಅವರು ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ವಚನ ಟ್ರಸ್ಟ್ ಹಾಗೂ ಧಾರವಾಡದ ಚೇತನ್ ಫೌಂಡೇಶನ್ ಸಹಯೋಗದಲ್ಲಿ ಡಾವಣಗೆರೆಯ ರೋಟರಿ ಸಭಾಂಗಣದಲ್ಲಿ ಎರ್ಪಡಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಅತಿಥಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ಬಸವ ಜಯಂತಿ ಅಂಗವಾಗಿ ವಿವಿದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರನ್ನು ಗುರುತಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಬಸವ ಚೇತನ, ಬಸವಶ್ರೀ ಪ್ರಶಸ್ತಿಯೊಂದಿಗೆ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಡಾವಣಗೆರೆ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೆ.ಬಿ.ಪರಮೇಶ್ವರಪ್ಪ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ವಚನ ವೈಭವ ಕುರಿತು ಸಾಹಿತಿ ಬಿ.ರಂಗಸ್ವಾಮಿ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು  ಪರಮೇಶ್ವರಪ್ಪ ಸಿರಗೇರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೂಡಲಗಿಯ ಎನ್.ಎಂ.ರವಿಕುಮಾರ, ಧಾರವಾಡದ ಎಲ್.ಐ.ಲಕ್ಕಮ್ಮನವರ, ಬೆಂಗಳೂರಿನ ಸಾಹಿತಿ ಯಾಸ್ಮಿನ್‌ಭಾನು ಬಿ. ಆಗಮಿಸಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಧಾರವಾಡದ ಚೇತನ್ ಫೌಂಡೇಶನ್‌ದ ಅಧ್ಯಕ್ಷ ಡಾ.ಚಂದ್ರಶೇಖರ ಮಾಡಲಗೇರಿ ಬಸವ ಜಯಂತಿಯ ನಿಮಿತ್ಯವಾಗಿ ಸಾಧಕರನ್ನು ಸನ್ಮಾನಿಸುವದು ಫೌಂಡೇಶನ್‌ದ ಉದ್ದೇಶವಾಗಿದ್ದು ಬರಲಿರುವ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಎಲ್ಲ ಜಿಲ್ಲೆಗಳಲ್ಲೂ ಹಮ್ಮಿಕೊಳ್ಳುವ ಮೂಲಕ ಹಿರಿಯ ಸಾಧಕರನ್ನು ಗೌರವಿಸಲಾಗುವದು ಎಂದರು.

ರಾಷ್ಟ್ರಕೂಟ ಮಹಾಸಭಾದ ವಿಚಾರಗಳಾದ ತಂದೆ ತಾಯಿ ಇಲ್ಲದ ಮಕ್ಕಳ ಹಾಗೂ ಅಲೆಮಾರಿ ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ, ಫ್ರೀ ಕೆಟಗೇರಿ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಮಾಡುವಲ್ಲಿ, ಬಾಲ್ಯವಿವಾಹ ಹಾಗೂ ಮೂಢನಂಬಿಕೆಗಳ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸುವಿಕೆಯಲ್ಲಿ ಗಣನೀಯ ಕಾರ್ಯ ಮಾಡಿದ ಗದುಗಿನ ಶ್ರೀಮತಿ ಸುಜಾತಾ ಪಾಟೀಲ  ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್