LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜು.11 ರಂದು ರಾಷ್ಟಿçÃಯ ಲೋಕ್ ಅದಾಲತ್


ಬಳ್ಳಾರಿ,ಮೇ 22 ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುವ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು. ರಾಷ್ಟಿçÃಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ವಿವಿಧ ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್