LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೂನ್ 28 ರಂದು ರಾಷ್ಟಿçÃಯ ಪಲ್ಸ್ ಪೋಲಿಯೋ ಅಭಿಯಾನ


ಬಳ್ಳಾರಿ,ಜೂ.12
ರಾಜ್ಯದಲ್ಲಿ ಹುಟ್ಟಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟಿçÃಯ ಲಸಿಕಾ ದಿನ (ಪಲ್ಸ್ ಪೋಲಿಯೋ)' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.
ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟçವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟçಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್ ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
*ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ:*
ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್