LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮುಸಲಾಪೂರದಲ್ಲಿ ರಾಷ್ಟ್ರೀಯ ಹಾವು ಕಡಿತ ನಿಯಂತ್ರಣ ಜಾಗೃತಿ ಕಾರ್ಯಕ್ರಮ


ಕೊಪ್ಪಳ ಮೇ 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಸಲಾಪೂರ ಇವರ ಸಂಯುಕ್ತಾಶ್ರಯದಲ್ಲಿ ಮೇ 22 ರಂದು ಮುಸಲಾಪೂರ ಗ್ರಾಮದಲ್ಲಿ “ರಾಷ್ಟ್ರೀಯ ಹಾವು ಕಡಿತ ನಿಯಂತ್ರಣ ಜಾಗೃತಿ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ದೇವಮ್ಮ ಅವರು ಮಾತನಾಡಿ, ಹಾವು ಕಡಿತದಿಂದ ಉಂಟಾಗುವ ಮರಣವನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಭಾರತ ಹಳ್ಳಿಗಳ ದೇಶ ಶೇ. 70ಕ್ಕಿಂತಲೂ ಹೆಚ್ಚು ಜನರು ಕೃಷಿಯಲ್ಲಿ ಅವಲಂಬಿತರಾಗಿದ್ದಾರೆ. ಭಾರತದಲ್ಲಿ ಪ್ರಮುಖ 4 ವಿಷಕಾರಿ ಹಾವುಗಳಾದ ನಾಗರಹಾವು, ಕಟ್ಟಾವು, ಕೊಳಕುಮಂಡಲ ಹಾವು ಹಾಗೂ ಗರಗಸ ಮಂಡಲ ಹಾವು ಕಡಿತದಿಂದ ಉಂಟಾಗುವ ಸಾವುಗಳಲ್ಲಿ 90% ಅಧಿಕ ಸಾವುಗಳಿಗೆ ಕಾರಣವಾಗುತ್ತವೆ. ಹಾಗಾಗಿ ಈ 4 ಹಾವುಗಳ ಬಗ್ಗೆ ಎಚ್ಚರಿಗೆ ವಹಿಸಬೇಕು ಎಂದರು.
ನಾಗರಹಾವು ಬಿಟ್ಟು ಉಳಿತ 3 ವಿಷಕಾರಿ ಹಾವುಗಳು ರಾತ್ರಿವೇಳೆ ಹೆಚ್ಚು ಚಟುವಟಿಕೆಯಿಂದಿರುತ್ತವೆ. ಹಾಗಾಗಿ ರಾತ್ರಿವೇಳೆ ಹೊರಗಡೆ ಹೋಗುವಾಗ ಟಾರ್ಚ್ ಬಳಸಬೇಕು. ಮನೆ ಅಂಗಳವನ್ನು ಇಲಿ ಹೆಗ್ಗನಗಳಂತಹ ಹಾವುಗಳು ತಿನ್ನುವ ಜೀವಿಗಳಿಂದ ಮುಕ್ತವಾಗಿಸುವುದು. ಮನೆಯಂಗಳ ಅಥವಾ ಹೊಲಗದ್ದೆಗಳಲ್ಲಿ ಸಾಮಾನ್ಯವಾಗಿ ತಿರುಗಾಡುವ ಸ್ಥಳಗಳಲ್ಲಿ ಗಿಡಗಂಟಿಗಳನ್ನು ಕಡಿದು ಸ್ವಚ್ಚವಾಗಿಟ್ಟುಕೊಳ್ಳಬೇಕು. ಹಾವುಗಳಿರುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಕೆಲಸ ಮಾಡುವಾಗ ಶೂಗಳನ್ನು ಬಳಕೆ ಮಾಡಬೇಕು. ರಾತ್ರಿ ಮನೆಯ ಹೊರಗೆ ಹಾಗೂ ಹೊಲಗದ್ದೆಗಳಲ್ಲಿ ಮಲಗಬೇಕಾದಾಗ ನೆಲದಲ್ಲಿ ಮಲಗದೆ ಎತ್ತರ ಪ್ರದೇಶದ ಮಂಚ ಬಳಸುವುದು, ನೆಲದಲ್ಲಿ ಮಲಗಲೇ ಬೇಕೆಂದರೆ ಕಡ್ಡಾಯವಾಗಿ ಸೊಳ್ಳೆಪರದೆ ಬಳಸುವುದು ಹಾಗೂ ರೈತರು ಹೊಲದಲ್ಲಿ ದನ-ಕರಗಳಿಗೆ ಮೇವು ಹಾಗೂ ಹಸಿಹುಲ್ಲು ಕಿಳುವಾಗ ಕುಡುಗೊಲು ಬಳಸಬೇಕು. ಒಂದು ವೇಳೆ ಹಾವು ಕಚ್ಚಿದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ 40 ನಿಮಿಷದೊಳಗಾಗಿ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಹಾವು ಕಡೆದ ವ್ಯಕ್ತಿಯನ್ನು ಸಮಾದಾನ ಪಡಿಸಿ, ಗಾಬರಿ ಪಡಿಸಬೇಡಿ. ಹಾವಿನಿಂದ ನಿಧಾನವಾಗಿ ದೂರ ಸರಿಯಿರಿ. ರಕ್ತಬಂಧಕಪಟ್ಟಿ ಕಟ್ಟಬೇಡಿ. ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಿ. ಗಾಯವನ್ನು ಕತ್ತರಿಸಬೇಡಿ, ಏನನ್ನು ಹಚ್ಚಬೇಡಿ. ಹಾವು ಕಚ್ಚಿದ ವ್ಯಕ್ತಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಕೊಡಿಸಿ. ನಾಟಿ ಔಷಧ ಅಥವಾ ಅಸುರಕ್ಷಿತ ಚಿಕಿತ್ಸಾ ಪದ್ದತಿಯನ್ನು ಅವಲಂಬಿಸಬೇಡಿ. ಒಟ್ಟಾರೆಯಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯ ಸುತ್ತ-ಮುತ್ತಲಿನ ಪ್ರದೇಶ ಸ್ವಚ್ಛತೆಯಿಂದ ಇಟ್ಟುಕೊಂಡು ಇದರ ಬಗ್ಗೆ ಇತರರಿಗೂ ಮಾಹಿತಿ ನೀಡಿ, ಜಾಗೃತರಾಗಬೇಕೆಂದು ತಿಳಿಸಿದರು.
ಮುಸಲಾಪೂರ ಪ್ರಾಥಮಿಕ ಆರೋಗ್ಯ ಕೇಂದದ್ರ ವೈದ್ಯಾಧಿಕಾರಿಗಳಾದ ಡಾ. ಅಂಜುಮತಾಜ್ ಅವರು ಮಾತನಾಡಿ, ರೇಬೀಸ್ ವೈರಸ್ ಸೋಂಕಿತ ಪ್ರಾಣಿಗಳು ಮನುಷ್ಯರಿಗೆ ಕಚ್ಚುವುದರಿಂದ ಹರಡುತ್ತದೆ. ಹೆಚ್ಚು ಪ್ರಮಾಣದಲ್ಲಿ ಬೀದಿನಾಯಿಗಳ ಕಡಿತದಿಂದ ಸಂಬಂಧಿಸುತ್ತದೆ. ಒಂದುವೇಳೆ ನಾಯಿ ಕಚ್ಚಿದರೆ, ಕಚ್ಚಿದ ಜಾಗವನ್ನು ಸೋಪು ಮತ್ತು ಶುದ್ದ ಹರಿಯುವ ನಲ್ಲಿ(ನಳ) ನೀರಿನಲ್ಲಿ 15 ನಿಮೀಷ ತೊಳೆಯಬೇಕು. ಕಚ್ಚಿದ ಜಾಗಕ್ಕೆ ಸ್ಥಳೀಯವಾಗಿ ಲಭ್ಯವಿರುವ ನಂಜು ನಿರೋಧಕ ಔಷಧಿ ಲಭ್ಯವಿದ್ದರೆ ಹಚ್ಚಿರಿ. ಕಚ್ಚಿದ ಜಾಗವನ್ನು ಬ್ಯಾಂಡೇಜ್ ಅಥವಾ ಯಾವುದೇ ರೀತಿಯ ಬಟ್ಟೆಯಿಂದ ಮುಚ್ಚಬೇಡಿ. ಕಚ್ಚಿದ ಜಾಗಕ್ಕೆ ಕೇಸರು ಅಥವಾ ಹಸುವಿನ ಸಗಣೆ, ಕಾಫಿಪುಡಿ, ಮೆಣಸಿನಪುಡಿ, ಸುಣ್ಣ ಅಥವಾ ಇತರೆ ಯವುದೇ ಕಿರಿ-ಕಿರಿ ಉಂಟುಮಾಡುವ ಪದಾರ್ಥ ಹಚ್ಚಬೇಡಿ. ಎಲ್ಲಾ ನಾಯಿಗಳಿಗೆ ಪಶು ಸಂಗೋಪನಾ ಇಲಾಖೆಯಿಂದ ನೀಡುವ ಚುಚ್ಚುಮದ್ದನ್ನು ತಪ್ಪದೇ ಹಾಕಿಸಬೇಕು. ನಾಯಿ ಅಥವಾ ಯಾವುದೇ ಪ್ರಾಣಿ ಕಡಿತವಾದಲ್ಲಿ ತಕ್ಷಣ ನಿಮ್ಮ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಅಥವಾ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿಬೇಕು. ನಾಯಿ ಕಡಿತದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬೀಸ್ ತಡೆಗಟ್ಟುವ ಲಸಿಕೆ(ಎ.ಆರ್.ವಿ) ಮತ್ತು ರೇಬಿಸ್ ಇಮ್ಯುನೊ ಗ್ಲೋಬ್ಯುಲಿನ್(ಆರ್.ಐ.ಜಿ) ಚಿಕಿತ್ಸೆ ಉಚಿತವಾಗಿರುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಸಹಾಯಕರಾದ ವೀರುಪಾಕ್ಷಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಿವಕುಮಾರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಯಾಸ್ಮಿನ್, ಆಶಾ ಕಾರ್ಯಕರ್ತೆಯರು, ಗ್ರಾಮದ ನಾಗರಿಕರು, ಗರ್ಭಿಣಿ ಬಾಣಂತಿಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ