LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನವೀನ್ ಶಂಕರ್ ವಿಭಿನ್ನ ಚಿತ್ರ ನೋಡಿದವರು ಏನಂತಾರೆ 

     ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ 'ನೋಡಿದವರು ಏನಂತಾರೆ' ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ.


      'ನೋಡಿದವರು ಏನಂತಾರೆ' ಸಿನಿಮಾಗೆ ಪ್ರತಿಭಾತ್ವಿತ ನಟ ನವೀನ್ ಶಂಕರ್ ಸಾಥ್ ಕೊಟ್ಟಿದ್ದಾರೆ. ನಾಯಕನಟನಾಗಿ ನಟಿಸಿದ್ದು, ಅಪೂರ್ವ ಭಾರದ್ವಾಜ್ ನಾಯಕಿಯಾಗಿದ್ದಾರೆ. ಹೊಯ್ಸಳ, ಕ್ಷೇತ್ರಪತಿ ಮತ್ತು ಸಲಾರ್  ಸಿನಿಮಾಗಳಲ್ಲಿ ರಗಡ್ ಹಾಗೂ ಇಂಟೆನ್ಸ್ ಪಾತ್ರಗಳ ಮೂಲಕ ಎಲ್ಲರ ಗಮನಸೆಳೆದಿದ್ದ ನವೀನ್ ಶಂಕರ್ ಅವರು ಈ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಲಿದ್ದಾರೆ.


     ನಿರ್ದೇಶಕರ ಹೇಳುವಂತೆ "ನವೀನ್ ಶಂಕರ್ ಅವರ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ  ಮನುಷ್ಯನ ಕಥೆ ಹಾಗು ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತ್ವಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಸಾಗುತ್ತದೆ".


     ಕರ್ನಾಟಕದ ಪ್ರೇಕ್ಷಣೀಯ ಹಾಗೂ ಯಾರೂ ಕಂಡಿರದ ಸುಂದರ ತಾಣಗಳಲ್ಲಿ ನೋಡಿದವರು ಏನಂತಾರೆ ಸಿನಿಮಾ ಚಿತ್ರೀಕರಣಗೊಂಡಿದೆ. ಆಶ್ವಿನ್ ಕೆನೆಡಿ ಛಾಯಾಗ್ರಾಹಕರಾಗಿ ಆಕರ್ಷಕ ದೃಶ್ಯಗಳ ಮೂಲಕ ಕಥೆಯನ್ನು ಜೀವಂತವಾಗಿಸಿದ್ದಾರೆ. ಮಯೂರೆಶ್ ಅಧಿಕಾರಿ ಹೃದಯಸ್ಪರ್ಶಿ ಸಂಗೀತವನ್ನು ಸಂಯೋಜಿಸಿದ್ದಾರೆ. ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ.  ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.


ಖ್ಯಾತ ಲೇಖಕ ಹಾಗು ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಒಂದು ಹಾಡಿಗೆ ಲೈಲಾ ಪದ ಪೊಣಿಸಿದ್ದಾರೆ.  ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಜನವರಿ 31, 2025 ರಂದು ಬಿಡುಗಡೆಯಾಗುತ್ತಿರುವ 'ನೋಡಿದವರು ಏನಂತಾರೆ' ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್