LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

262 ಕೋಟಿ ರೂ. ಮೌಲ್ಯದ ಮೆಥಾಂಫೆಟಮೈನ್ ವಶಪಡಿಸಿಕೊಂಡ NCB

ದೆಹಲಿ, ನ.24: ರಾಷ್ಟ್ರ ರಾಜಧಾನಿಯಲ್ಲಿ  ಅತಿದೊಡ್ಡ ಮಟ್ಟದ ಮಾದಕ ವಸ್ತುಗಳನ್ನುNCB (ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ) ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆಯ ಮೂಲಕ ವಶಪಡಿಸಿಕೊಳ್ಳಲಾಗಿತ್ತು. ದಾಳಿಯಲ್ಲಿ 262 ಕೋಟಿ ರೂ. ಮೌಲ್ಯದ 328 ಕೆಜಿ ಮೆಥಾಂಫೆಟಮೈನ್ (ಮೆಥ್ / ಐಸ್) ಜಪ್ತಿ ಮಾಡಲಾಗಿತ್ತು. NCB ಹಾಗೂ ದೆಹಲಿ ಪೊಲೀಸರು, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಾಳಿ ನಡೆಸಿತ್ತು. ದೆಹಲಿಯ ತೋಟದ ಮನೆಯೊಂದಕ್ಕೆ ಕೂಡ ದಾಳಿಯನ್ನು ಮಾಡಲಾಗಿತ್ತು. ಈ ವೇಳೆ ಭಾರೀ ಮೌಲ್ಯದ ಡ್ರಗ್ಸ್​​​ಗಳು ಸಿಕ್ಕಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಾಲ್ಯಾಂಡ್ ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.





ಇನ್ನು ಈ ಕಾರ್ಯಚರಣೆಯಲ್ಲಿ ಉತ್ತರ ಪ್ರದೇಶದ ಅಮ್ರೋಹಾದ ಮಂಗ್ರೌಲಿ ಗ್ರಾಮದ ನೋಯ್ಡಾ ಸೆಕ್ಟರ್ -5ರ ನಿವಾಸಿ 25 ವರ್ಷದ ಶೇನ್ ವಾರಿಸ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಇದೀಗ ಈ ಕಾರ್ಯಚರಣೆ ವೇಗ ಸಿಕ್ಕಿದೆ. ಮಾರಾಟ ವ್ಯವಸ್ಥಾಪಕ ಎಂದು ವಾರಿಸ್, ನಕಲಿ ಸಿಮ್ ಕಾರ್ಡ್‌ಗಳು, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ, ಇದರ ಜತೆಗೆ ವಿದೇಶಿ ಮೂಲದ ಕಿಂಗ್‌ಪಿನ್‌ನೊಂದಿಗೆ ಸಂಪರ್ಕವನ್ನು ಕೂಡ ಹೊಂದಿದ್ದ ಎಂದು ಹೇಳಲಾಗಿದೆ. ನ.20ರಂದು ಶೇನ್ ವಾರಿಸ್​​​ನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಇನ್ನು ಪೋರ್ಟರ್ ಡೆಲಿವರಿ ರೈಡರ್ ಮೂಲಕ ಎಸ್ತರ್ ಕಿನಿಮಿ ಎಂಬ ಮಹಿಳೆ ಈ ಮಾದಕ ವಸ್ತುಗಳನ್ನು ಸಾಗಿಸಿದ್ದಾಳೆ ಎಂದು ಹೇಳಲಾಗಿದೆ. ಈ ಮಹಿಳೆಗೆ ವಾರಿಸ್ ತನ್ನ ಸಂಪರ್ಕ ಸಂಖ್ಯೆಗಳು, ವಿಳಾಸ ಮತ್ತು ಇತರ ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿದ್ದ ಎಂದು ಹೇಳಲಾಗಿದೆ. ಇಬ್ಬರು ಸೇರಿ ವಿದೇಶಕ್ಕೆ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ