LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ; ಅಶೋಕ ಪಟ್ಟಣ

ರಾಮದುರ್ಗ:

ಗ್ರಾಮದ ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ ವಹಿಸಲಾಗುವದು. ಈಗಾಗಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಧ್ಯೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ಬೇಡಿಕೆಗಳನ್ನು ಈಡೆರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ತಾಲೂಕಿನ ಕಟಕೋಳ ಗ್ರಾಮದಲ್ಲಿ ರೂ.೨.೬೦ ಕೋಟಿ ಅನುದಾನದಲ್ಲಿ ಮುನವಳ್ಳಿ-ಕೊಟಮುಗಚಿ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ದಿ ಹಾಗೂ ತೋರಣಗಟ್ಟಿ ಗ್ರಾಮದಲ್ಲಿ ರೂ. ೩೦ ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಸೇರಿದಂತೆ ೨.೯೦ ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಮುಖ್ಯ ರಸ್ತೆ ಸೇರಿದಂತೆ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ತೋರಣಗಟ್ಟಿ ಗ್ರಾಮದ ಅಜ್ಜಯ್ಯಸ್ವಾಮಿ, ಮಹಾಂತಯ್ಯ ಬೇವಿನಮಠ, ಶಿದ್ಲಿಂಗಪ್ಪ ಶಿಂಗಾರಗೊಪ್ಪ, ಶಿವಪ್ಪ ಮುನವಳ್ಳಿ, ಮಹಾದೇವ ಚಿನ್ನಾಕಟ್ಟಿ, ಗ್ರಾ.ಪಂ. ಆಡಳಿತಾಧಿಕಾರಿ ಪ್ರಕಾಶ ಮುಗಳಖೋಡ, ಬಾಳಪ್ಪ ತೊಂಡಿಕಟ್ಟಿ, ಪಿಕೆಪಿಎಸ್ ಅಧ್ಯಕ್ಷ   ಪರಮೇಶ ಐನಾಪೂರ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ ತಿಪ್ಪನ್ನವರ, ಗ್ರಾ.ಪಂ ಮಾಜಿ ಅಧ್ಯಕ್ಷೆಯರಾದ ಲಕ್ಷ್ಮೀ ಮುದಗೋಡ, ಅನಸವ್ವ ಬಡಕಲೂರ, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಉಪಸ್ಥಿತರಿದ್ದರು. ರುದ್ರಪ್ಪ ಶಿಂಗಾರಗೊಪ್ಪ ಸ್ವಾಗತಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್