LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅದೇ ಹೆಸರು ಹೊಸ ಸಿನಿಮಾ ಯಾರಿಗೂ ಹೇಳ್ಬೇಡಿ  

    ಮೂರು ದಶಕಗಳ ಹಿಂದೆ 'ಯಾರಿಗೂ ಹೇಳ್ಬೇಡಿ' ಚಿತ್ರವು ತೆರೆಕಂಡು ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ತೆರೆಗೆ ಬರಲು ಸಿದ್ದವಾಗಿದೆ.

     ಕಿಚ್ಚ ಸುದೀಪ್ ಈಗಾಗಲೇ ಟ್ರೇಲರ್ ಬಿಡುಗಡೆ ಮಾಡಿ ಮೆಚ್ಚುಗೆಯ ಮಾತನಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ.

ನಂತರ ಟ್ರೇಲರ್ ಬಿಡುಗಡೆ ಸಮಾರಂಭ  ನಡೆಯಿತು.

     ಈ ಸಂದರ್ಭದಲ್ಲಿ ಮಾಹಿತಿ ಹಂಚಿಕೊಂಡ ನಾಯಕ ಚೇತನ್ ವಿಕ್ಕಿ, "ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರವಾಗಿದೆ ಶುರುವಿನಿಂದ ಕೊನೆವರೆಗೂ ನಗಿಸುತ್ತಲೇ ಸಾಗುತ್ತದೆ. ನಾನಿಲ್ಲಿ ವಿಡಿಯೋ ಜಾಕಿಯಾಗಿ ಕಾಣಿಸಿಕೊಂಡಿದ್ದು, ಮದುವೆ ಮುಂಚಿನ ಒಂದು ಸಂದರ್ಭದಲ್ಲಿ ಸುಳ್ಳು ಹೇಳಿ ಕಷ್ಟಕ್ಕೆ ಸಿಲುಕುತ್ತೇನೆ. ಅದನ್ನು ಯಾರಿಗೂ ಹೇಳ್ಬೇಡಿ ಎಂದು ಸುಳ್ಳಿನ ಸರಮಾಲೆಯನ್ನೆ ಕಟ್ಟುತ್ತೇನೆ. ಕೊನೆಗೆ ಅದನ್ನು ಮುಚ್ಚಿಡಲು ಹೋದಾಗ ಏನೆಲ್ಲಾ ಅವಾಂತರಗಳು ಆಗುತ್ತದೆ. ಅದರಿಂದ ಹೇಗೆ ಹೊರಗೆ ಬರುತ್ತೇನೆ ಎಂಬುದು ಕಾಮಿಡಿ ಮೂಲಕ ಹೇಳಲಾಗಿದೆ. ನೋಡುಗರಿಗೆ ಪೈಸಾ ವಸೂಲ್ ಸಿನಿಮಾ ಅಂತ ಖಂಡಿತ ಹೇಳಬಹುದು. ನಿಮ್ಮಗಳ ಸಹಕಾರ ಬೇಕು " ಎಂದು ಕೋರಿದರು.

     ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿರುವ ಹೈದರಬಾದ್‌ನ ಹರೀಶ್ ಅಮ್ಮಿನೇನಿ ಕನ್ನಡ ಭಾಷೆಯ ಅಭಿಮಾನದ ಮೇಲೆ ಬಂಡವಾಳ ಹೂಡಿದ್ದು, ಸುನಿಲ್‌ಕುಮಾರ್ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಶಿವಗಣೇಶ್ ಆಕ್ಷನ್ ಕಟ್ ಹೇಳಿದ್ದಾರೆ.

      ಕಾಮಿಡಿ ಕಿಲಾಡಿಗಳು ಖ್ಯಾತಿಯ ಅಪ್ಪಣ್ಣ ಸ್ನೇಹಿತನಾಗಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ ಸಿನಿಮಾಗಳಲ್ಲಿ ಅಭಿನಯಿಸಿದ್ದ ಚೈತ್ರಾ ಆಚಾರ್ ಡಾಕ್ಟರ್ ಪಾತ್ರದಲ್ಲಿ ನಾಯಕಿ. ಅಶ್ವಿನಿ ಪೊಲೆಪಲ್ಲಿ ಉಪನಾಯಕಿ. ಉಳಿದಂತೆ ಶರತ್ ಲೋಹಿತಾಶ್ವ, ಚೈತ್ರಾರಾವ್, ಶಭರೇಶ್, ಕಾರ್ತಿಕ್ ಮುಂತಾದವರು ನಟಿಸಿದ್ದಾರೆ.

      ಸಂಗೀತ ಶಶಾಂಕ್ ಶೇಷಗಿರಿ, ಛಾಯಾಗ್ರಹಣ ಡೇವಿಡ್‌ಆನಂದರಾಜ್, ಸಂಭಾಷಣೆ ಶಿವರಾಜ್.ಡಿಎನ್‌ಎಸ್, ಹಿನ್ನಲೆ ಸಂಗೀತ ಉದಿತ್‌ಹರಿದಾಸ್, ಸಾಹಸ ಕುಂಗುಫು ಚಂದ್ರು, ಸಾಹಿತ್ಯ ಕವಿರಾಜ್-ಪ್ರಮೋದ್ ಮರವಂತೆ, ಸಂಕಲನ ದೀಪಕ್.ಸಿ.ಎಸ್.


ಈ ಸಂದರ್ಭದಲ್ಲಿ ಮಾಹಿತಿ ಹಂಚಿಕೊಂಡ ನಾಯಕ ಚೇತನ್ ವಿಕ್ಕಿ, "ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರವಾಗಿದೆ ಶುರುವಿನಿಂದ ಕೊನೆವರೆಗೂ ನಗಿಸುತ್ತಲೇ ಸಾಗುತ್ತದೆ. ನಾನಿಲ್ಲಿ ವಿಡಿಯೋ ಜಾಕಿಯಾಗಿ ಕಾಣಿಸಿಕೊಂಡಿದ್ದು, ಮದುವೆ ಮುಂಚಿನ ಒಂದು ಸಂದರ್ಭದಲ್ಲಿ ಸುಳ್ಳು ಹೇಳಿ ಕಷ್ಟಕ್ಕೆ ಸಿಲುಕುತ್ತೇನೆ. ಅದನ್ನು ಯಾರಿಗೂ ಹೇಳ್ಬೇಡಿ ಎಂದು ಸುಳ್ಳಿನ ಸರಮಾಲೆಯನ್ನೆ ಕಟ್ಟುತ್ತೇನೆ. ಕೊನೆಗೆ ಅದನ್ನು ಮುಚ್ಚಿಡಲು ಹೋದಾಗ ಏನೆಲ್ಲಾ ಅವಾಂತರಗಳು ಆಗುತ್ತದೆ. ಅದರಿಂದ ಹೇಗೆ ಹೊರಗೆ ಬರುತ್ತೇನೆ ಎಂಬುದು ಕಾಮಿಡಿ ಮೂಲಕ ಹೇಳಲಾಗಿದೆ. ನೋಡುಗರಿಗೆ ಪೈಸಾ ವಸೂಲ್ ಸಿನಿಮಾ ಅಂತ ಖಂಡಿತ ಹೇಳಬಹುದು. ನಿಮ್ಮಗಳ ಸಹಕಾರ ಬೇಕು " ಎಂದು ಕೋರಿದರು. ಅಂದ ಹಾಗೆ ಚಿತ್ರವು ಇದೇ ತಿಂಗಳು ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್