LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ನಿಜಶರಣ ಅಂಬಿಗರ ಚೌಡಯ್ಯನವರು : ಎಸ್.ವಿ.ಸಂಕನೂರ


ಗದಗ ಜನೆವರಿ ೨೧:  ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದವರು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ೨೦೨೬  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಅಂಬಿಗರಚೌಡಯ್ಯನವರು ೧೨ ನೇ ಶತಮಾನದಲ್ಲಿನ ಶಿವಶರಣರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದ್ದಾಗಿತ್ತು. ಬಸವಣ್ಣನವರಿಂದ ಲಿಂಗದ ದೀಕ್ಷೆಯನ್ನು ಪಡೆದರು. ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಇವರ ವಚನಗಳ ಅಂಕಿತವಾಗಿದೆ. ಅಂಬಿಗರ ಚೌಡಯ್ಯನವರು ನೇರವಾದ ನುಡಿ ದಿಟ್ಟವಾದ ನಡೆಗೆ ಹೆಸರಾಗಿದ್ದರು. ನಿಷ್ಟುರವಾದಿಗಳಾಗಿದ್ದು ಸಮಾಜದಲ್ಲಿನ ಮೂಡನಂಬಿಕೆ, ಕಂದಾಚಾರ ಹೊಡೆದೋಡಿಸಿ ಸಮಾಜ ಸುಧಾರಣೆಗೆ ಶ್ರಮಿಸಿದವರು ಎಂದು ತಿಳಿಸಿದ  ಎಸ್.ವಿ.ಸಂಕನೂರ ಅವರು ನಾವು ವೈಚಾರಿಕವಾಗಿ ಬದುಕಲು ಕಲಿಯಬೇಕು. ಸ್ವಾಭಿಮಾನದಿಂದ ಹಾಗೂ ಆತ್ಮ ವಿಶ್ವಾಸದಿಂದ ಬದುಕಬೇಕು. ಅಂಬಿಗರ ಚೌಡಯ್ಯನವರ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್.ಅವರು ಮಾತನಾಡಿ ಅಂಬಿಗರ ಚೌಡಯ್ಯನವರು ನೇರ ನಿಷ್ಟುರವಾದಿಗಳಾಗಿದ್ದರು.  ಡೋಣಿ ನಡೆಸುವ ಕಾಯಕ ಇವರದಾಗಿತ್ತು.  ಕಾಯಕ ನಿಷ್ಟೆಗೆ ಹೆಸರಾದ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಿ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದ ಅಪರ ಜಿಲ್ಲಾಧಿಕಾರಿಗಳು  ಸಮಾಜ ಸುಧಾರಣೆಯಾಗಬೇಕಾದರೆ ಶಿಕ್ಷಣವೊಂದೇ ಮಾರ್ಗವಾಗಿದೆ. ಆದಕಾರಣ ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದರು.


ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ನರೇಗಲ್ ದ ಉಪನ್ಯಾಸಕ ಶಿವಾನಂದ ಗೋಗೇರಿ ಅವರು ಅಂಬಿಗರ ಚೌಡಯ್ಯನವರ ಕುರಿತು ಉಪನ್ಯಾಸ ನೀಡಿದರು.  ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಡಿವೈಎಸ್‌ಪಿ ವಿದ್ಯಾಧರ ನಾಯಕ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾಧ್ಯಕ್ಷ ಜೆ.ಬಿ.ಗಾರವಾಡ, ಉಪಾಧ್ಯಕ್ಷ ಸಿ.ಪಿ.ಬಾರಕೇರ, ತಾಲೂಕಾಧ್ಯಕ್ಷ ಡಾ.ಗಣೇಶ ಸುಲ್ತಾನಪುರ, ಪ್ರಮುಖರಾದ ಶ್ರೀಮತಿ ಯಶೋಧಾ ಜಾಲಗಾರ, ಶಕುಂತಲಾ ಜಕನೂರ, ಪ್ರೇಮಾ ಮನಗೂಳಿ, ಕೀರ್ತಿ ಜಕನೂರ, ಪ್ರಕಾಶ ಪೂಜಾರ, ಕೆ.ಎನ್.ಸುಣಗಾರ, ಮಂಜುನಾಥ ಸುಣಗಾರ, ಸುಭಾಸ ಕದಡಿ, ಮಾಲತೇಶ ಬಾರ್ಕಿ, ಮಾರುತಿ ಕೌದಿ, ಚಂದ್ರಶೇಖರ ಅಂಬಿಗೇರ, ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಪ್ರಮುಖರು, ಗಣ್ಯರು, ಹಿರಿಯರು ಹಾಜರಿದ್ದರು. ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್