LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಮೋದಿ ಅವರ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಮೈಸೂರು,11: 'ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಸಿಎಂ ಈ ರೀತಿಯಾಗಿ ಪ್ರತಿಕ್ರಿಯಿಸಿದರು.


ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ರಾಜಕೀಯವಾಗಿ ವಿರೋಧ ಮಾಡ್ತಾರೆ. ಪ್ರಧಾನಿ ಕಳೆದ 10 ವರ್ಷಗಳಿಂದ ಬಡವರ ಪರವಾಗಿ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ದೇಶದಲ್ಲಿ ಪ್ರಧಾನ ಮಂತ್ರಿ ಅವರನ್ನು ಸೋಲಿಸಬೇಕು ಎಂಬುದೇ ವಿರೋಧ ಪಕ್ಷದವರ ಉದ್ದೇಶ.


ಕಳೆದ ಬಾರಿ ಪ್ರಧಾನಿಗೆ ಗೆಲ್ಲುವ ವಿಶ್ವಾಸವಿತ್ತು. ಆದರೆ ಈ ಬಾರಿ ಸೋಲಿನ ಭಯದಿಂದ ಹತಾಶರಾಗಿ ಮಾತನಾಡುತ್ತಿದ್ದಾರೆ. ಮೋದಿ ಅವರು ಸುಳ್ಳಿನ ಸರದಾರ ಎಂಬುದು ಜನರಿಗೆ ಗೊತ್ತಾಗಿದೆ. ಅವರ ಬಣ್ಣ ದೇಶದ ಜನರಿಗೆ ಗೊತ್ತಾಗಿದೆ. ಈ ಬಾರಿ ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಇವರ ಭಾವಾನಾತ್ಮಕ ಮಾತುಗಳು ಜನರಿಗೆ ಗೊತ್ತಾಗಿದೆ. ಮೇಲಕ್ಕೆ ಏರಿದವನು ಕೆಳಗೆ ಇಳಿಯಲೇಬೇಕು ಎಂದು ಪ್ರಧಾನಿ ಹೇಳಿಕೆಗೆ ಮುಖ್ಯಮಂತ್ರಿಗಳು ನೀಡಿದರು.


ಬಿಎಸ್​ವೈಗೆ ನೈತಿಕತೆ ಇಲ್ಲ: ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ. ರೈತರ ಸಾಲಮನ್ನಾ ಮಾಡಬೇಕು ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ನಾವು ಹಿಂದೆ ಯಡಿಯೂರಪ್ಪನವರನ್ನು ಸಾಲಮನ್ನಾ ಮಾಡಿ ಎಂದು ಕೇಳಿದಾಗ, ನಮ್ಮ ಬಳಿ ಪ್ರಿಂಟಿಂಗ್ ಮಿಷನ್ ಇಲ್ಲ ಎಂದು ಹೇಳಿದ್ದರು. ಈಗ ರೈತರ ಸಾಲ ಮನ್ನಾ ಮಾಡಿ ಎಂದು ಹೇಳಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ