LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ರೈತರಿಂದ ನೇರವಾಗಿ ವಿಷಮುಕ್ತ ಉತ್ಪನ್ನ: ಗಾಂಧಿ ಭವನದಲ್ಲಿ ಸಂತೆ

*ಬಳ್ಳಾರಿ:17:ವಿಷಮುಕ್ತ ಹಾಗೂ ಸಾವಯವ ಕೃಷಿ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ನಗರದಲ್ಲಿ ಸಾವಯವ ಸಂತೆ ಆರಂಭಿಸಲಾಗುತ್ತಿದೆ.
ಆಗಸ್ಟ್ 26ರಿಂದ ಪ್ರತಿ ಬುಧವಾರ ನಗರದ ಗಾಂಧಿ ಭವನದಲ್ಲಿ ಮಧ್ಯಾಹ್ನ 12ರಿಂದ ಸಂಜೆ 7ರವರೆಗೆ ಸಂತೆ ನಡೆಯಲಿದೆ ಎಂದು ಸಾವಯವ ಕೃಷಿಕ ಜಯಚಂದ್ರ ಶರ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಯವ ಕೃಷಿಗೆ ಉತ್ತೇಜನ ನೀಡಲು ಈ ಪ್ರಯತ್ನ ಕೈಗೊಳ್ಳಲಾಗಿದೆ. ಪ್ರಾಯೋಗಿಕವಾಗಿ ಚಾಮರಾಜನಗರದಲ್ಲಿ ಆರಂಭವಾದ ಈ ಯೋಜನೆಯನ್ನು ಮೊದಲು ಬೆಂಗಳೂರಿನಲ್ಲಿ ರಾಜ್ಯಮಟ್ಟದಲ್ಲಿ ನಡೆಸಲಾಗಿತ್ತು. ಇದೀಗ ಜಿಲ್ಲಾಮಟ್ಟದಲ್ಲಿ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸಾವಯವ ಸಂತೆ ಆರಂಭವಾಗುತ್ತಿದೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ಇರಪ್ಪಯ್ಯ ಮಾತನಾಡಿ, ಜಿಲ್ಲೆಯಲ್ಲಿ ವಿಷಮುಕ್ತ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರೈತರು ಬೆಳೆದ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಉತ್ಪನ್ನಗಳ ಗುಣಮಟ್ಟದ ಜವಾಬ್ದಾರಿಯನ್ನು ರೈತ ಸಂಘ ವಹಿಸಲಿದೆ ಎಂದು ಹೇಳಿದರು.
ಸಂತೆಯಲ್ಲಿ 280ಕ್ಕೂ ಹೆಚ್ಚು ವಿವಿಧ ಸಾವಯವ ಉತ್ಪನ್ನಗಳು ಲಭ್ಯವಾಗಲಿವೆ. ವಿಷಮುಕ್ತ ಆಹಾರ ಪದ್ಧತಿಯ ಕುರಿತು ಜಾಗೃತಿ ಮೂಡಿಸುವುದು ಮತ್ತು ಪ್ರತಿ ಮನೆಯ ಅಡುಗೆ ಮನೆಯಲ್ಲಿ ಸಾವಯವ ಉತ್ಪನ್ನಗಳ ಬಳಕೆ ಹೆಚ್ಚಿಸುವುದು ಸಂತೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ರೈತರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕದಿಂದ ರೈತರಿಗೆ ನ್ಯಾಯಯುತ ಬೆಲೆ ಮತ್ತು ಗ್ರಾಹಕರಿಗೆ ಗುಣಮಟ್ಟದ ಆಹಾರ ದೊರೆಯಲಿದೆ. “ನಿಮ್ಮ ಆರೋಗ್ಯದ ಭದ್ರತೆಯನ್ನು ನಾವು ಕಾಪಾಡುತ್ತೇವೆ, ನಮ್ಮ ಆರ್ಥಿಕತೆಯನ್ನು ನೀವು ಕಾಪಾಡಿ” ಎಂದು ಗ್ರಾಹಕರಲ್ಲಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮೋಹನ್ ಗೈಕ್ವಾಡ್, ವಿವೇಕಾನಂದ, ಹುಲಿಕೆರೆ ವಿಶ್ವೇಶ್ವರ ಸಜ್ಜನ್, ಗೋವಿಂದರಾಜುಲು, ಈಶ್ವರ್ ರೆಡ್ಡಿ, ಶಿಲ್ಪಾ, ರವಿಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ