LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ ಶಾಸಕರು ಭಿಕ್ಷುಕರ ತರ ಬೇಡಬೇಕು: ಶಾಸಕ ರಾಜು ಕಾಗೆ

ಬೆಳಗಾವಿ: ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷುಕರ ತರ ಭಿಕ್ಷೆ ಬೇಡಿಕೊಳ್ಳಬೇಕು. ಕೊನೆಗೆ ಹತ್ತು, ಇಪ್ಪತ್ತು ಪೈಸೆ ಕೊಟ್ಟು ಸಮಾದಾನ ಮಾಡುತ್ತಾರೆ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಹಾಯಕತೆ ಹೊರಹಾಕಿದರು.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ಇಲ್ಲಿಗೆ ಬಂದು ಎಲ್ಲರ ಮುಂದೆ ಕೈಮುಗಿದು ನಿಲ್ಲಬೇಕು. ನಾನು ಈ ಬಗ್ಗೆ ಧ್ವನಿ ಎತ್ತಿದ್ದೆ. ಆದರೆ ನಾನು ನನ್ನ ಪಕ್ಷದ ವಿರುದ್ಧ ಮಾತನಾಡಿದ್ದೆ ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗಿತ್ತು. ನಾನು ಸರ್ಕಾರದ ವಿರುದ್ಧ ಮಾತನಾಡಿಲ್ಲ. ಅಧಿಕಾರಿಗಳು ಪಾರದರ್ಶಕತೆಯಿಂದ ಕೆಲಸ ಮಾಡಬೇಕು ಎಂದಿದ್ದೆ ಎಂದು ವಿವರಿಸಿದರು.

ಉತ್ತರ ಕರ್ನಾಟಕ ಭಾಗಕ್ಕೆ ಐದು ಸಾವಿರ ಕೋಟಿ ರೂ.‌ಕೊಡಿ:
ನಾನು ಪ್ರಧಾನಿ, ಸಿಎಂಗೆ ಪ್ರತ್ಯೇಕ ರಾಜ್ಯ ಮಾಡುವಂತೆ ಕೋರಿ ಪತ್ರ ಬರೆದಿದ್ದೆ. ಇದು ನನ್ನ ಅನಿಸಿಕೆ ಮಾತ್ರ ಆಗಿತ್ತು. ಇದಕ್ಕೆ ಕೆಲ ಸಂಘ ಸಂಸ್ಥೆಗಳು ಬೆಂಬಲಿಸಿದರು. ಕೆಲವರು ಟೀಕೆ ಮಾಡಿದರು. ಕಲ್ಯಾಣ ಕರ್ನಾಟಕದ 371ಜೆ ಯಿಂದ ನಮಗೆ ಏನೂ ಉಪಯೋಗ ಇಲ್ಲ. ಉತ್ತರ ಕರ್ನಾಟಕ ಭಾಗಕ್ಕೂ ಐದು ಸಾವಿರ ಕೋಟಿ ಕೊಡಿ ಎಂಬುದು ನನ್ನ ಮನವಿ. ಏಕೆಂದರೆ ನಮ್ಮ ಭಾಗವೂ ಹಿಂದುಳಿದಿದೆ. ನಮ್ಮಲ್ಲಿ ಅನೇಕರು ಇನ್ನೂ ಬೆಂಗಳೂರು ನೋಡಿಲ್ಲ. ಏಕೆಂದರೆ, ಸುಮಾರು 800 ಕಿ. ಮೀ. ದೂರ ಇದೆ ಎಂದರು. ಕಲ್ಯಾಣ ಕರ್ನಾಟಕ ಜೊತೆ ಜೊತೆಗೆ ಉತ್ತರ ಕರ್ನಾಟಕ ಭಾಗಕ್ಕೂ ಸುಮಾರು 5,000 ದಿಂದ 10,000 ಕೋಟಿ ರೂ. ನೀಡಬೇಕು ಎಂಬುದು ನನ್ನ ಮನವಿಯಾಗಿತು.

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಸಾಯೋ ತನಕ ನಾನು ಹೋರಾಡುವೆ:

ರಾಜು ಕಾಗೆ ಅವರು ತಮ್ಮ ಮಾತು ಸರ್ಕಾರದ ಪರ ಅಥವಾ ವಿರುದ್ಧ ಅಲ್ಲ, ಬದಲಿಗೆ ಸತ್ಯವನ್ನು ಹೇಳುತ್ತಿದ್ದೇನೆ ಎಂದರು. 'ನಮ್ಮ ಗೋಳು ಯಾರಿಗೆ ಹೇಳಬೇಕು? ನಾನು ಏನಾದರೂ ಮಾತನಾಡಿದರೆ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದೇನೆ ಎನ್ನುತ್ತಾರೆ. ಅದಕ್ಕೆ ನಾವು ಪ್ರತ್ಯೇಕ ರಾಜ್ಯ ಕೇಳೊದು. 'ಯಾರು ಬೇಕಾದರೂ ಬರಲಿ, ಯಾರು ಬೇಕಾದರೂ ವಿರೋಧ ಮಾಡಲಿ. ನಾನು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡೇ ಮಾಡ್ತೀನಿ. ಸಾಯಲಿ ಬಿಡ್ಲಿ.... ನಾನು ಹೋರಾಟ ಮಾಡೋನೆ' ಎಂದು ಸದನದಲ್ಲಿ ನಿಂತು ಮತ್ತೊಮ್ಮೆ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಪ್ರಖರವಾಗಿ ಮಂಡಿಸಿದರು.

ಬೆಂಗಳೂರಲ್ಲಿ ಕಂದಾಯ ಕಾರ್ಯದರ್ಶಿ ಕಟಾರಿಯಾ ಅವರಿಗೆ ಮನವಿ ಕೊಡಲು ಭೇಟಿ ಮಾಡಿದ್ದೆ. ಆದರೆ ಆ ಅಧಿಕಾರಿ ನನ್ನ ಮವಿಯನ್ನು ಸ್ವೀಕರಿಸದೇ ಎದ್ದು ಹೋಗ್ತಾರೆ ಎಂದು ಆರೋಪಿಸಿದರು.

ಕಳೆದ ಬಾರಿಯ ಅಧಿವೇಶನದಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ್ದೆ. ಆದರೆ, ಇದುವರೆಗೂ ಆ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ. ಎಂದು ಶಾಸಕ ಕಾಗೆ ಆಕ್ಷೇಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್