LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: 2 ಅಧಿಕಾರಿಗಳು ಎಸ್​​ಐಟಿ ವಶಕ್ಕೆ

ಬೆಂಗಳೂರು, ಜೂ. 01: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಮಾನತುಗೊಂಡಿರುವ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಸಚಿವ ನಾಗೇಂದ್ರ ಅವರಿಗೆ ತಲೆ ನೋವಾಗಿ ಪರಿಣಮಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್​ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆ ನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಇದೆ.

ರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್