LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪರಪ್ಪನ ಅಗ್ರಹಾರದಲ್ಲಿ ದರ್ಶನ್​ಗೆ​ ರಾಜಾತಿಥ್ಯ ಬೆನ್ನಲ್ಲೇ ಜೈಲರ್​ ಸೇರಿಂದತೆ 43 ಮಂದಿ ವರ್ಗಾವಣೆ

ಬೆಂಗಳೂರು, ಸೆಪ್ಟೆಂಬರ್​ 14: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನಗೆ  ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ದಲ್ಲಿ ರಾಜಾತಿಥ್ಯ ನೀಡಿದ ಫೋಟೋ ಬಹಿರಂಗಗೊಂಡಿತ್ತು. ಇದು ರಾಜ್ಯ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ವಿವಾದ ಬೆನ್ನಲ್ಲೇ ಕಾರಾಗೃಹ ಇಲಾಖೆಗೆ ಸರ್ಕಾರ ಮೇಜರ್​ ಸರ್ಜರಿ ಮಾಡಿದೆ. ಜೈಲರ್​ ಸೇರಿಂದತೆ 43 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.

ವಿವಿಧ ಜೈಲ್​ಗಳ ಜೈಲರ್​ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್​​ ಸೇರಿ 43 ಮಂದಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಕೊಲೆ ಆರೋಪಿ ದರ್ಶನ್​ಗೆ​ ರಾಜಾತಿಥ್ಯ ನೀಡಿದಕ್ಕೆ ಪರಪ್ಪನ ಅಗ್ರಹಾರದ 9 ಮಂದಿ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಬಳಿಕ, ಆರೋಪಿ ದರ್ಶನ್​ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್​ಶೀಟ್​ ಸಲ್ಲಿಕೆಯಾಗಿದ್ದು, ಆರೋಪಿ ದರ್ಶನ್​ ಜಾಮೀನಿಗಾಗಿ ಕಾಯುತ್ತಿದ್ದಾರೆ. ಹಾಗೆ, ಬಳ್ಳಾರಿ ಜೈಲಿನಿಂದ ಬೆಳಗಾವಿ ಜೈಲಿಗೆ ಶಿಫ್ಟ್​ ಮಾಡುವಂತೆ ದರ್ಶನ್​ ಮನವಿ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST