LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೋವಿಶೀಲ್ಡ್​​ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮ: ಮೊದಲ ಬಾರಿಗೆ ಒಪ್ಪಿಕೊಂಡ ಅಸ್ಟ್ರಾಜೆನೆಕಾ!

 ದೆಹಲಿ,30: ಕೋವಿಶೀಲ್ಡ್ ಔಷಧಿಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ  ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತನ್ನ ಲಸಿಕೆಯಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟಾಗಬಹುದು, ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಕುರಿತು ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ಅಸ್ಟ್ರಾಜೆನೆಕಾ ಪ್ರತಿಪಾದಿಸಿದೆ.

ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್‌ ಕೋವಿಶೀಲ್ಡ್‌ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಮತ್ತು ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದ್ದ ಕಾರಣ, ಲಂಡನ್‌ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ ಪಾರ್ಶ್ವವಾಯು, ಹೃದಯಸ್ತಂಭನ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಇದು ಪ್ಲೇಟ್​ಲೆಟ್​ಗಳಸ ಸಂಖ್ಯೆಯನ್ನೂ ಕೂಡ ಕಡಿಮೆ ಮಾಡುತ್ತದೆ.

ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ.

ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ. ವಿಶ್ವದಾದ್ಯಂತ 78 ಕೋಟಿ ಜನರಿಗೆ ಕೊರೊನಾ ಸೋಂಕು ತಗುಲಿತ್ತು, 70 ಲಕ್ಷಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಭಾರತದಲ್ಲಿ 45 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ವ್ಯಾಪಿಸಿ 5 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

 


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ