LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಶ್ಲೀಲ ವಿಡಿಯೋ ಪ್ರಕರಣ : ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶಕ್ಕೆ ಪ್ರಜ್ವಲ್​ ರೇವಣ್ಣ ಮನವಿ !

ಬೆಂಗಳೂರು, (ಮೇ 01): ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಎಸ್​ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದ್ರೆ, ಪ್ರಜ್ವಲ್​ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ. ಇನ್ನು ಎ1 ಆರೋಪಿ ಎಚ್​ಡಿ ರೇವಣ್ಣ ಅವರು ನಾಳೆ(ಮೇ 02) ವಿಚಾರಣೆಗೆ ಹಾಜರಾಗಲಿದ್ದಾರೆ. ಇದರ ಮಧ್ಯೆ ಇದೀಗ ಎಸ್​ಐಟಿ ನೋಟಿಸ್​ಗೆ ಪ್ರಕರಣದ ಎ2 ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ದಿಢೀರ್ ಪ್ರತ್ಯಕ್ಷರಾಗಿದ್ದು,  ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರು ಅವರಿಗೆ ತಿಳಿಸಿದ್ದೇನೆ. ಸತ್ಯ ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್​ ವಿದೇಶದಲ್ಲಿರುವುದರಿಂದ ಕಾಲಾವಕಾಶ ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್​ಐಟಿಗೆ ಕಾಲಾವಕಾಶ ಕೇಳಿದ್ದೇನೆ. ಇಂದು (ಮೇ 01) ಮಧ್ಯಾಹ್ನ ಸಿಐಡಿ ಕಚೇರಿಗೆ ತೆರಳಿ 7 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ. ಆದ್ರೆ, ತನಿಖಾಧಿಕಾರಿಗಳಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಸ್​ಐಟಿ ಅಧಿಕಾರಿಗಳು 7 ದಿನ ಸಮಯ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿರುವುದರಿಂದ ಹಾಸನ ಲೋಕಸಭಾ ಕ್ಷೇತ್ರದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರಾತ್ರೋರಾತ್ರಿ ಜರ್ಮಿನಿಗೆ ಹಾರಿದ್ದು, ನಾಡಿದ್ದು ಅಂದರೆ ಮೇ 3ಕ್ಕೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಬಳಿಕ ವಕೀಲರ ಜೊತೆ ಚರ್ಚಿಸಿ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ