LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಏ.೧೦ರಂದು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ರಾಜ್ಯಮಟ್ಟದ ಬೃಹತ್ ಜನ ಸಮಾವೇಶ!



ಬಳ್ಳಾರಿ,ಏ.07./: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ ೪೦,೦೦೦ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಏ.೧೦ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ನಮ್ಮೂರ ಶಾಲೆ ಉಳಿಸಿ ರಾಜ್ಯಮಟ್ಟದ “ಜನ ಸಮಾವೇಶ” ಕುರಿತು ಎಐಡಿಎಸ್‌ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಪತ್ರಿಕಾ ಭವನದಲ್ಲಿ “ಪತ್ರಿಕಾ ಗೋಷ್ಠಿ” ನಡೆಸಲಾಯಿತು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಎಐಡಿಎಸ್‌ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡುತ್ತಾ....

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ೪೦,೦೦೦ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ ಕಳೆದ ೪ ತಿಂಗಳಿನಿAದ ಜನ ಹೋರಾಟ ನಡೆದಿದೆ. ಎಐಡಿಎಸ್‌ಓ ನೇತೃತ್ವದಲ್ಲಿ ರಾಜ್ಯದಾದ್ಯಂತ ಹಳ್ಳಿ-ಹಳ್ಳಿಗಳಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಗಳನ್ನು ರಚಿಸಿಕೊಂಡು ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಒಕ್ಕೊರಲಿನಿಂದ ಧ್ವನಿಯೆತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ೬೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಯಲ್ಲಿದೆ. ನಾಡಿನ ಹೆಸರಾಂತ ಸಾಹಿತಿಗಳು, ಶಿಕ್ಷಣ ತಜ್ಞರು ಹಾಗೂ ಶಿಕ್ಷಣ ಪ್ರೇಮಿಗಳು ಬಡಮಕ್ಕಳನ್ನು ಶಿಕ್ಷಣದಿಂದ ಶಾಶ್ವತವಾಗಿ ದೂರ ತಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.

ನಾಡಿನ ಜನತೆಯ ತೀವ್ರ ವಿರೋಧದ ನಡುವೆಯೂ ಸರ್ಕಾರ ಶಾಲೆಗಳನ್ನು ಮುಚ್ಚುವ ಕೆಲಸವನ್ನು ಮುಂದುವರಿಸಿದೆ. ಸರ್ಕಾರವು ಈಗಾಗಲೇ ಯಾವ-ಯಾವ ಶಾಲೆಗಳನ್ನು ವಿಲೀನಗೊಳಿಸಬೇಕೆಂದು ಮ್ಯಾಪಿಂಗ್ ನಡೆಸಿದೆ. ಅಧಿಕಾರಿಗಳಿಂದ ಮ್ಯಾಗ್ನೆಟ್ ಶಾಲೆಯ ಸಮೀಕ್ಷೆ ಮಾಡಿಸಲಾಗುತ್ತಿದೆ. ವಿಲೀನಗೊಳ್ಳುವ ಶಾಲೆಗಳ ಮುಖ್ಯಶಿಕ್ಷಕರಿಗೆ ಮೌಖಿಕವಾಗಿ ಆದೇಶ ನೀಡಲಾಗಿದೆ. ಏಪ್ರಿಲ್ ೯ ಮತ್ತು ೧೦ರಂದು ನಡೆಯಲಿರುವ ಪೋಷಕರ ಸಭೆಗಳಲ್ಲಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮಕ್ಕಳನ್ನು ಏPS ಶಾಲೆಗೆ ಕಳುಹಿಸುವಂತೆ ಒತ್ತಾಯಿಸಲು ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ಈ ಯೋಜನೆಯನ್ನು ಶತಾಯಗತಾಯ ಅನುಷ್ಠಾನಗೊಳಿಸಲು ಏಪ್ರಿಲ್ ಒಂದರAದು ಜಿಲ್ಲೆಯ ಡಿಡಿಪಿಐ ಹಾಗೂ ಬಿಇಓಗಳ ಸಭೆಯನ್ನು ನಡೆಸಿ ಶಾಲೆ ಮುಚ್ಚಲು ಕುತಂತ್ರ ನಡೆಸಿದೆ.

ಸರ್ಕಾರದ ಈ ಕಡು ಜನವಿರೋಧಿ ಮತ್ತು ನಿರಂಕುಶ ನಡೆಯ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಎಐಡಿಎಸ್‌ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಜನ ಸಮಾವೇಶವನ್ನು ೧೦ ಏಪ್ರಿಲ್ ೨೦೨೬ರಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಯೋಜಿಸಲಾಗಿದೆ. ಬಳ್ಳಾರಿ ಜಿಲ್ಲೆಯಿಂದಲೂ ಸಹ ಹಳ್ಳಿ-ಹಳ್ಳಿಗಳಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ‘ನಮ್ಮೂರ ಶಾಲೆ ಉಳಿಯಲಿ' ಎಂಬ ಘೋಷಗಳನ್ನು ಮೊಳಗಿಸುತ್ತ ನೂರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ಬರಲು ತಯಾರಿ ನಡೆಸಿದ್ದಾರೆ.

“ನಾಡಿನ ಹಿರಿಯ ಸಾಹಿತಿಗಳಾದ ಡಾ. ಹಂಪ ನಾಗರಾಜಯ್ಯ, ಡಾ. ಕೆ ಮರುಳಸಿದ್ದಪ್ಪ, ಪ್ರೊ ಎಸ್ ಜಿ ಸಿದ್ದರಾಮಯ್ಯ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ. ಅಲ್ಲಮಪ್ರಭು ಬೆಟ್ಟದೂರು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಎ ಮುರಿಗೆಪ್ಪ, ಹಿರಿಯ ಹೋರಾಟಗಾರರಾದ ಶ್ರೀ ರಾಘವೇಂದ್ರ ಕುಷ್ಟಗಿ, ಹಿರಿಯ ನ್ಯಾಯವಾದಿಗಳಾದ ಶ್ರೀಮತಿ ಹೇಮಲತಾ ಮಹಿಷಿ, ಶಿಕ್ಷಣ ತಜ್ಞರಾದ ನಿರಂಜನರಾಧ್ಯ ವಿ ಪಿ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ ಸಬಿಹಾ ಭೂಮಿಗೌಡ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಸಾಮಾಜಿಕ ಹೋರಾಟಗಾರರಾದ ಉಗ್ರ ನರಸಿಂಹೇಗೌಡ, ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿಗಳಾದ ಅಜಯ್ ಕಾಮತ್, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ವಿಎನ್ ರಾಜಶೇಖರ್, ಎಐಕೆಕೆಎಂಎಸ್ ರೈತ ಸಂಘಟನೆಯ ರಾಜ್ಯಾಧ್ಯಕ್ಷರಾದ ಶಶಿಧರ್ ಎಂ, ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಸೋಮಶೇಖರ ಕೆ, ಎಐಎಂಎಸ್‌ಎಸ್ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಶೋಭಾ ಎಸ್, ಎಐಡಿವೈಓ ಯುವಜನ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಸಿದ್ಧಲಿಂಗ ಬಾಗೇವಾಡಿ ಹಾಗೂ ಎಐಡಿಎಸ್‌ಓ ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ ಎಸ್ ಸೇರಿದಂತೆ ನಾಡಿನ ಅನೇಕ ಸಾಹಿತಿಗಳು ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧದ ರಾಜ್ಯಮಟ್ಟದ ಜನಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸಲಹೆಗಾರರಾದ ಆರ್ ಸೋಮಶೇಖರ್ ಗೌಡ, ಉಪಾಧ್ಯಕ್ಷರಾದ ಶಾಂತ, ಸೌಮ್ಯ, ಮಾನಯ್ಯ ಮಲ್ಲಿಕಾರ್ಜುನ, ಸದಸ್ಯರಾದ ಶಾಂತಿ ಮತ್ತು ಮಲ್ಲಿಕಾರ್ಜುನ್ ಅವರು ವೇದಿಕೆ ಮೇಲಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ