LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆಗಸ್ಟ್ 17ರವರೆಗೆ ಭಾರಿ ಮಳೆ: ಬೆಂಗಳೂರಿಗೆ ಆರೆಂಜ್ ಅಲರ್ಟ್​!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಗಿನ ಜಾವ ಮಳೆಯಾಗಿದೆ, ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಯಲ್ಪಾಡು, ಬೆಂಗಳೂರು ನಗರ, ಕೊಳ್ಳೇಗಾಲ, ಸಿದ್ದಾಪುರ, ಹಗರಿಬೊಮ್ಮನಹಳ್ಳಿ, ದೇವನಹಳ್ಳಿ, ಗೋಕರ್ಣ, ಬಾಳೆಹೊನ್ನೂರು, ಹೊಸಕೋಟೆ, ಕ್ಯಾಸಲ್​ರಾಕ್, ಹುಣಸೂರು, ಗುಂಡ್ಲುಪೇಟೆ, ಆಗುಂಬೆ, ಭಾಗಮಂಡಲ, ರಾಮನಗರ, ಕೋಲಾರ, ಕೆಆರ್​ನಗರದಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್