LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ : ಪ್ರಭುದೇವ ಪಾಟೀಲ ದಂಪತಿಗಳಿಂದ ಗಂಗಾ ಪೂಜೆ

ಸಂಕೇಶ್ವರ : ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದ ಹಿರಣ್ಯಕೇಶಿ ನದಿಯು ಉಕ್ಕಿ ಹರಿಯುತ್ತಿದ್ದು, ಆದರಿಂದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವತಿಯಿಂದ ನಿರ್ದೇಶಕರಾದ ಪ್ರಭುದೇವ ಪಾಟೀಲ ದಂಪತಿಗಳು ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಶುಕ್ರವಾರ ನದಿಗೆ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅವರಿಂದ ಪೂಜೆ ಪುನಸ್ಕಾರಗಳು ನಡೆಸಿ, ಬಾಗಿನ ಅರ್ಪಿಸಲಾಯಿತ್ತು.
ಕಾರ್ಖಾನೆಯ ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ ಮಾತನಾಡಿ, ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದ ಹಿರಣ್ಯಕೇಶಿ ನದಿ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿದೆ. ಮುಂಬರುವ ಹಂಗಾಮಿನಲ್ಲಿ 10 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚಿನ ಕಬ್ಬು ಅರೆಯುವ ಗುರಿ ಹೊಂದಲಾಗಿದ್ದು, ಕಬ್ಬು ಬೆಳೆಗಾರರ ಸಂಪೂರ್ಣ ಸಹಕಾರದಿಂದ ಈ ಗುರಿ ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ವ್ಯವಸ್ಥಾಪಕ ನಿರ್ದೇಶಕ ಮಹಾದೇವಸ್ವಾಮಿ ಡಿ.ಎಸ್., ಕಾರ್ಯಾಲಯ ಅಧೀಕ್ಷಕ ಸುಭಾಷ ನಾಶಿಪುಡಿ, ಅಕೌಂಟ್ಸ್ ಜನರಲ್ ಸಿ.ಬಿ. ಮರೇದಿ, ಮುಖ್ಯ ಅಭಿಯಂತರ ಪಿ.ಎಂ. ಖೋತ, ಮುಖ್ಯ ರಸಾಯನಶಾಸ್ತ್ರಜ್ಞ (ಪ್ರೊಸೆಸ್) ಜಿ.ಬಿ. ಪಾಟೀಲ, ಡಿಸ್ಟಿಲರಿ ಮುಖ್ಯ ರಸಾಯನಶಾಸ್ತ್ರಜ್ಞ ಭರತೇಶ ತೇರಣಿ, ವಾಹನ ವಿಭಾಗದ ಅಭಿಯಂತರ ಎಸ್.ಎ. ಕಲ್ಲಟ್ಟಿ, ಕಬ್ಬು ಅಭಿವೃದ್ಧಿ ಅಧಿಕಾರಿ ಆರ್.ವಿ. ರೇವಣ್ಣವರ, ಸಮಯಪಾಲಕ ಎನ್.ಎಸ್. ಮರಬಸನ್ನವರ, ಭದ್ರತಾ ಅಧಿಕಾರಿ ಎಂ.ಬಿ. ಇಂಗಳಿ, ಸ್ಟೋರ್ ಕೀಪರ್ ಜಿ.ಐ. ಬೊಮ್ಮನ್ನವರ, ಮಾರಾಟಾಧಿಕಾರಿ ಡಿ.ಎನ್. ಚೌಗಲಾ, ಖರೀದಿ ಅಧಿಕಾರಿ ಉಮೇಶ ಪಾಟೀಲ, ಗೋದಾಮು ಕೀಪರ್ ಎಸ್.ಎಂ. ಅಂಕಲಗಿ ಸೇರಿದಂತೆ ಕಾರ್ಖಾನೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್