LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್‌ಐಆರ್‌ನಲ್ಲಿ ಭಾಗವಹಿಸಿ; ಸರ್ಕಾರಿ ಸೌಲಭ್ಯಗಳನ್ನು ಪಡೆಯಿರಿ ; ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್ ಕರೆ 

ಬಳ್ಳಾರಿ, ಜು. 02: ಸರ್ಕಾರದ ವಿವಿಧ ಸೌಲಭ್ಯಗಳು, ಅದರಲ್ಲೂ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಪ್ರತಿಯೊಬ್ಬ ಅರ್ಹ ಮತದಾರರೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಕರೆ ನೀಡಿದರು.
ನಗರದ ಕೋಟೆ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ  ತಮ್ಮ ಹಾಗೂ ಕುಟುಂಬದ ಸದಸ್ಯರ ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡಿ ಬಿ ಎಲ್ ಓ ಗೆ ಸಲ್ಲಿಸಿದ ಬಳಿಕ ಮಾತನಾಡಿ, 
ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನ ಕೈಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಈ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಆಧಾರ್ ಜೋಡಣೆ, ಭಾವಚಿತ್ರದ ಸ್ಪಷ್ಟತೆ ಹಾಗೂ ಎಸ್‌ಐಆರ್ ಮಾರ್ಗಸೂಚಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಜಾಗೃತಿ ಮೂಡಿಸಿದರು.
ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರವನ್ನು ಅರ್ಜಿಗೆ ಅಂಟಿಸುವಾಗ ಬಣ್ಣದ ಭಾವಚಿತ್ರವನ್ನು ನೀಡಬೇಕು 
 ಭಾವಚಿತ್ರದಲ್ಲಿನ ಉಡುಪಿನ ಬಣ್ಣ ಮತ್ತು ಹಿನ್ನಲೆಯ ಬಣ್ಣ ಒಂದೇ ರೀತಿಯಾಗಿರಬಾರದು. ಇದರಿಂದ ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಸ್ಪಷ್ಟವಾಗಿ ಮುದ್ರಣವಾಗಲು ಅಸ್ಪಷ್ಟತೆ ಉಂಟಾಗುತ್ತದೆ  ಎಂದು ಸಲಹೆ ನೀಡಿದರು.
 ಈ ಸಂದರ್ಭದಲ್ಲಿ  ಸಹಾಯಕ ಆಯುಕ್ತ  ರಾಜೇಶ್ ಮಾತನಾಡಿ ಯಾವೊಬ್ಬ ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗೂಳಿಯಬಾರದು ಹಾಗೆಯೇ ಅನರ್ಹರು ಮತದಾರ ಪಟ್ಟಿಯಲ್ಲಿ ಇರಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗ 24 ವರ್ಷಗಳ ನಂತರ ಈಗ ವಿಶೇಷ ಮತದಾರರ ಪರಿಷ್ಕರಣೆಯನ್ನು ಹಮ್ಮಿಕೊಂಡಿದೆ ಎಲ್ಲರೂ ಇದರಲ್ಲಿ ಭಾಗವಹಿಸಿ ಏನು ಫಾರಂ ಭರ್ತಿ ಮಾಡಿ ಬಿ ಎಲ್ ಓ ಗಳಿಗೆ ಸಹಕರಿಸಬೇಕು ಏನಾದರೂ ಅನಾನುಕೂಲವಿದ್ದಲ್ಲಿ ಸ್ಥಳದಲ್ಲಿಯೇ ನಮ್ಮ ಅಧಿಕಾರಿಗಳು ನಿಮ್ಮ ಸಹಾಯಕ್ಕೆ ಇರಲಿದ್ದಾರೆ, ಇದರಿಂದ ಮತದಾರರು ಯಾವುದೇ ತಪ್ಪು ಕಲ್ಪನೆಯನ್ನು ಇಟ್ಟುಕೊಳ್ಳಬಾರದು ಮತ್ತು  ಯಾವುದೇ ಕಾರಣಕ್ಕೂ ಎಸ್ ಐ ಆರ್ ನಿಂದ ದೂರ ಇರಬೇಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹೆಚ್.ಡಿ. ರಾಜೇಶ್, ತಹಸೀಲ್ದಾರ್ ರೇಖಾ, ಎಸ್‌ಐಆರ್ ಮೇಲುಸ್ತುವಾರಿ ಮಂಜುನಾಥ ತಳವಾರ ಹಾಗೂ ಬಿಎಲ್‌ಒ ಸುಪ್ರೀತ, ಗೋವರ್ಧನ್, ನಟರಾಜ್ ಗೌಡ, ನಾಗರಾಜ್, ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್