LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜರಾಂಗೆ ಪಾಟೀಲ್ ಬೇಡಿಕೆಗೆ ಮಹಾ ಸರ್ಕಾರ ಅಸ್ತು; ಉಪವಾಸ ಅಂತ್ಯಗೊಳಿಸಿ ಆಸ್ಪತ್ರೆಗೆ ದಾಖಲು

ಮುಂಬೈ: ಮರಾಠ ಮೀಸಲಾತಿಗೆ ಒತ್ತಾಯಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮನೋಜ್ ಜರಾಂಗೆ ಪಾಟೀಲ್ ಬೇಡಿಕೆಗೆ ಸರ್ಕಾರ ಒಪ್ಪಿಕೊಂಡ ಹಿನ್ನೆಲೆ ಅವರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದು, ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರದ ಗ್ಯಾಲಕ್ಸಿ ಆಸ್ಪತ್ರೆಗೆ ಅವರನ್ನು ದಾಖಲಾಗಿದ್ದಾರೆ.


ಮಂಗಳವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಾದ ನಂತರ ವೈದ್ಯರು ಅವರನ್ನು ಪರೀಕ್ಷೆ ನಡೆಸಿದ್ದು, ದೀರ್ಘಕಾಲದ ಉಪವಾಸ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಮುಂದಿನ ಕೆಲವು ದಿನಗಳವರೆಗೆ ಅವರಿಗೆ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದು ಡಾ. ವಿನೋದ್ ಚವಾರೆ ತಿಳಿಸಿದ್ದಾರೆ


ಪ್ರಸ್ತುತ ಚಿಕಿತ್ಸೆ ಪ್ರಗತಿಯಲ್ಲಿದ್ದು, ವೈದ್ಯರು ಅವರಿಗೆ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಅವರನ್ನು ಎಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


ರಾಜ್ಯ ಸರ್ಕಾರ ಮಜೋಜ್ ಜರಾಂಗೆ ಪಾಟೀಲ್​​ ಅವರ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರಿಂದ ಸಂತಸಗೊಂಡಿದ್ದು,. ನಗರದಲ್ಲಿ ಸಂಭ್ರಮವಿದೆ. ಸರ್ಕಾರದ ಈ ನಿರ್ಧಾರವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗುತ್ತಿದೆ. ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲೂ ಮರಾಠಾ ಸಮುದಾಯದ ವಿವಿಧ ವರ್ಗಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಗಿದೆ. ಹಲವೆಡೆ ಸಿಹಿತಿಂಡಿಗಳನ್ನು ವಿತರಿಸುವ ಮೂಲಕ ಸಂತೋಷ ವ್ಯಕ್ತಪಡಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್