LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪೋಟೊಗ್ರಾಫಿ ಯುವಜನತೆಗೆ ಲಾಭದಾಯಕ ಕ್ಷೇತ್ರ: ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ


ಬಳ್ಳಾರಿ,ಜೂ.08
ಪೋಟೊಗ್ರಾಫಿ ಉದ್ಯಮವು ಇಂದು ಅತ್ಯಂತ ಜನಪ್ರಿಯ ಹಾಗೂ ಲಾಭದಾಯಕ ಕ್ಷೇತ್ರವಾಗಿ ಹೊರಹೊಮ್ಮಿದೆ. ಯುವಕರು ಆಸಕ್ತಿಯಿಂದ ತರಬೇತಿ ಪಡೆದು ಸ್ವಾವಲಂಬಿ ಯಶಸ್ವಿ ಉದ್ಯಮಿಗಳಾಗಬೇಕು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಕರೆ ನೀಡಿದರು.
ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿ ಉದ್ಘಾಟನೆ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ ಕಡ್ಡಾಯವಾಗಿ ಮರ ಬೆಳೆಸಬೇಕು. ನಾವು ಪರಿಸರವನ್ನು ರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಕಿವಿಮಾತು ಹೇಳಿದರು.
ಕೆನರಾ ಬ್ಯಾಂಕ್‌ನ ಜಿಲ್ಲಾ ಮಾರ್ಗದರ್ಶಿ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಫೋಟೋಗ್ರಾಫಿ ಉದ್ಯಮವು ಹೊಸ ಟ್ರೆಂಡ್ ಸೃಷ್ಟಿಸಿದೆ. ಪ್ರಿ-ವೆಡ್ಡಿಂಗ್ ಮತ್ತು ಫೋಟೋ ಶೂಟ್‌ಗಳಿಗಾಗಿ ಜನರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಶಿಬಿರಾರ್ಥಿಗಳು ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಬ್ಯಾಂಕ್‌ನಿAದ ಕಿರು ಆರ್ಥಿಕ ಸಾಲ ಸೌಲಭ್ಯವನ್ನು ಪಡೆದು ಸ್ವಂತ ಉದ್ಯಮ ಪ್ರಾರಂಭಿಸಬೇಕು ಎಂದು ಮಾರ್ಗದರ್ಶನ ನೀಡಿದರು. ಜೊತೆಗೆ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಆವರಣದಲ್ಲಿ 30 ಜನ ಶಿಬಿರಾರ್ಥಿಗಳೊಂದಿಗೆ ಒಟ್ಟಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ವಿನಯಕುಮಾರ ಬಿ.ಕೊಳ್ಳುರಮಠ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ ಹಾಗೂ ಸಂಸ್ಥೆಯ ಸಿಬ್ಬಂದಿಗಳಾದ ಜಡೇಪ್ಪ, ಸಿದ್ದಲಿಂಗಮ್ಮ, ಸಂತೋಷ ಕುಮಾರ ಮತ್ತು ಪರಮೇಶ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ