LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರೇಣುಕಾಸ್ವಾಮಿ ಮೊಬೈಲ್​ಗಾಗಿ ಪೊಲೀಸರ ತಲಾಶ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಮೊಬೈಲ್​ ಅನ್ನು ಸುಮನಹಳ್ಳಿ ಬ್ರಿಡ್ಜ್​ ಬಳಿಯ ರಾಜಕಾಲುವೆಯಲ್ಲಿ ಆರೋಪಿ ವಿನಯ್ ಬಿಸಾಕಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ‌ನೀಡಿದ್ದಾನೆ. ಹೀಗಾಗಿ ಮೊಬೈಲ್ ಬಿಸಾಕಿದ ಜಾಗಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆತಂದು ಮಹಜರಿಗೆ ಒಳಪಡಿಸಿದ್ದಾರೆ.


ಸುಮನಹಳ್ಳಿಯ ಸತ್ವ ಅನುಗ್ರಹ ಲೇಔಟ್ ಬಳಿಯಿರುವ ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಶವ ಬಿಸಾಕಿದ್ದರು‌. ಆರೋಪಿ ವಿನಯ್, ರೇಣುಕಾಸ್ವಾಮಿ ಬಳಸುತ್ತಿದ್ದ ಮೊಬೈಲ್ ಅನ್ನು ಇದೇ ರಾಜಕಾಲುವೆಯಲ್ಲಿ ಎಸೆದಿರುವುದಾಗಿ ವಿಚಾರಣೆಯಲ್ಲಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ಆರೋಪಿ ವಿನಯ್ ಅನ್ನು ಎಸಿಪಿ ಚಂದನ್ ಕುಮಾರ್ ನೇತೃತ್ವದ ತಂಡ ಕರೆದುಕೊಂಡು ಮಹಜರಿಗೆ ಒಳಪಡಿಸಿದೆ.


ಸದ್ಯ ಬಿಬಿಎಂಪಿ ಪೌರಕಾರ್ಮಿಕರನ್ನ ಕರೆತಂದು ರಾಜಕಾಲುವೆಯಲ್ಲಿ ಶೋಧ ಕಾರ್ಯ ಕೆಲಸ ಮಾಡಿಸಲಾಗುತ್ತಿದೆ. ಮೊಬೈಲ್ ಬಿಸಾಕಿದ ಜಾಗದಿಂದ ಹಿಡಿದು 200 ಮೀಟರ್​ವರೆಗೂ ಶೋಧ ನಡೆಸಲಾಗುತ್ತಿದೆ. ಒಂದು ವೇಳೆ ಮೃತನ ಮೊಬೈಲ್ ದೊರೆತರೆ ಕೊಲೆ ಪ್ರಕರಣಕ್ಕೆ ಮಹತ್ವದ ಸಾಕ್ಷಿಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ