LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಟ ದರ್ಶನ್​ ಅರೆಸ್ಟ್ ಬೆನ್ನಲ್ಲೇ ಮನೆ ಬಳಿ ಪೊಲೀಸ್ ಭದ್ರತೆ

ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST