LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕರ್ನಾಟಕದಲ್ಲಿ ಕಳಪೆ ರಸಗೊಬ್ಬರ ಮಾರಾಟ: ಕೇಂದ್ರ ಸರ್ಕಾರ

ಬೆಂಗಳೂರು: ನಕಲಿ, ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟದ ಐದು ಎಫ್‌ಐಆರ್‌ಗಳು ದಾಖಲಾಗಿದ್ದರೂ ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ: ಕೇಂದ್ರ

ಈ ವರ್ಷ ಕರ್ನಾಟಕದಲ್ಲಿ ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ, ಆದರೆ ಪ್ರಸ್ತುತ ಖಾರಿಫ್ ಋತುವಿಗೆ ರಾಜ್ಯದಲ್ಲಿ ರಸಗೊಬ್ಬರಗಳ ಸಾಕಷ್ಟು ಲಭ್ಯತೆ ಇದೆ ಎಂದು ಸ್ಪಷ್ಟಪಡಿಸಿದೆ.

ಲೋಕಸಭೆಯಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಚಿತ್ರದುರ್ಗ ಸಂಸದ ಗೋವಿಂದ್ ಎಂ. ಕಾರಜೋಳ ಅವರ ಪ್ರತ್ಯೇಕ ಪ್ರಶ್ನೆಗೆ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಉತ್ತರಿಸಿದ್ದಾರೆ, ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟ ಸಂಬಂಧ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ತಿಳಿಸಿದೆ ಎಂದು ಮಾಹಿತಿ ನೀಡಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದರೆ, ಹಾವೇರಿ ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ.

ಗ್ರಾಮೀಣ ಮಾರುಕಟ್ಟೆಗಳಲ್ಲಿ ನಕಲಿ ರಸಗೊಬ್ಬರಗಳ ಚಲಾವಣೆಯನ್ನು ಪತ್ತೆಹಚ್ಚಲು ಮತ್ತು ತಡೆಯಲು ಯಾವುದೇ ಕಾರ್ಯವಿಧಾನಗಳು ಪ್ರಸ್ತುತ ಜಾರಿಯಲ್ಲಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಕಲಿ ಮತ್ತು ಕಳಪೆ ರಸಗೊಬ್ಬರ ಮಾರಾಟವನ್ನು ತಡೆಯಲು 1985ರ ರಸಗೊಬ್ಬರ ನಿಯಂತ್ರಣ ಆದೇಶದ ಅನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ. ಇಂತಹ ಗೊಬ್ಬರ ಮಾರಾಟವು ಅಗತ್ಯ ವಸ್ತುಗಳ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್