LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿ

ಬೆಳಗಾವಿ, ಜೂ.21 (ಕರ್ನಾಟಕ ವಾರ್ತೆ): ಯೋಗಾಸನ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ಹೊಂದಿದ್ದು, ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ನಮ್ಮ ಶರೀರದಲ್ಲಿನ ರೋಗ ರುಜಿನಗಳನ್ನು ದೂರ ಮಾಡಿಕೊಳ್ಳುವುದರ ಜೊತೆಗೆ ಮನಸ್ಸನ್ನು ಸಮಚಿತ್ತದಿಂದ ಇಟ್ಟುಕೊಳ್ಳಬಹುದಾಗಿದೆ ಎಂದು ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ಜಿಲ್ಲಾ ಆಯುಷ ಇಲಾಖೆ ಸಹಯೋಗದಲ್ಲಿ ರವಿವಾರ(ಜೂ.21) ಸುವರ್ಣ ವಿಧಾನ ಸೌಧದಲ್ಲಿ ಜರುಗಿದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬದಲಾಗುತ್ತಿರುವ ಇಂದಿನ‌ ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಭಾರತದ ಪ್ರಾಚೀನ ಪದ್ಧತಿಯಾದಂತಹ ಯೋಗಾಸನ ಮಾಡುವುದು ಅತೀ ಅವಶ್ಯಕವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಸ್ಪರ್ಧಾತ್ಮಕ ಜಿವನ ಶೈಲಿಯಲ್ಲಿ  ನಮ್ಮ ನಿತ್ಯದ ಕೆಲಸದಲ್ಲಿ ನಿಪುಣತೆಯನ್ನು ಸಾಧಿಸಲು  ಯೋಗಾಸನ ಅಗತ್ಯವಾಗಿದ್ದು ಯೋಗಾಸನ ಮಾಡಲು ಸರಿಯಾದ ಆಸನದ ಜ್ಞಾನ ಹೊಂದುವುದು ಕೂಡಾ ಅಷ್ಟೇ ಪ್ರಮುಖವಾಗಿದೆ. ವೇದ ಉಪನಿಷತ್ತುಗಳ ಪ್ರಕಾರ ಜೂನ್ 21 ನೇ ದಿನ ಪ್ರಾಮುಖ್ಯತೆಯನ್ನು ಹೊಂದಿದ ದಿನವಾದ್ದರಿಂದ ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. 
ಐದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಯೋಗಾಸನವನ್ನು 140 ಕ್ಕೂ ಹೆಚ್ಚಿನ ದೇಶಗಳು ಒಪ್ಪಿಕೊಂಡಿವೆ. 
ದಿನದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಪ್ರಪಂಚದ ಯಾವುದಾದರೂ ಒಂದು ಪ್ರದೇಶದಲ್ಲಿ ಯೋಗಾಭ್ಯಾಸ ಜರುಗುತ್ತಿರುವುದರಿಂದ   ಯೋಗಾಸನಕ್ಕೆ ಗೋಲ್ಡನ್ ರಿಂಗ್ ಎಂದು ಕರೆಯಲಾಗುತ್ತದೆ ಎಂದರು.
ಯೋಗಾಸನ ಮಾಡಿದಷ್ಟು ದೇಹ ಹಾಗೂ ಮನಸ್ಸನ್ನು  ನಿಯಂತ್ರಿಸಬಹುದಾಗಿದ್ದು  ಪ್ರತಿಯೊಬ್ಬರು ಯೋಗಾಭ್ಯಾಸ ಮಾಡುವುದನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡು ಸಧೃಡ ಆರೋಗ್ಯ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು  ಕರೇ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಅಭಯ ಪಾಟೀಲ, ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರೆ ಪ್ರೀತಿ ಕಾಮಕಾರ, ಉಪ ಮಹಾಪೌರ ಹನುಂಮತ‌ ಕೊಂಗಾಲಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್,ಪೋಲಿಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ,ಪ್ರಶಿಕ್ಷಣಾರ್ಥಿ ಆಯ್.ಎ.ಎಸ್.ಅಧಿಕಾರಿ ರೋಹಿತ್ ಸಿಂಗ್, ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣದೊಳಿ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಯೋಗಾಸಕ್ತರು ಭಾಗವಹಿಸಿದ್ದರು.
ಅಂರಾಷ್ಟ್ರಿಯ ಯೋಗ ತರಬೇತಿದಾರರಾದ ಆರತಿ ಸಂಕೇಶ್ವರಿ ಅವರ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಯೋಗ ಪಟುಗಳಾದ ಸತ್ಯಮ್ ಹಾಗೂ ಗಾಯತ್ರಿ ಅವರುಗಳಿಂದ ವಿವಿಧ ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಿ ಅವುಗಳ ಮಹತ್ವವನ್ನು ವಿವರಿಸಿದರು. ತದನಂತರ ವಿವಿಧ ಶಾಲಾ  ವಿಧ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳು ಜರುಗಿದವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್