LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ರೇವಣ್ಣ ನಿವಾಸಗಳ ಮೇಲೆ SIT ದಾಳಿ, ಸಾಕ್ಷ್ಯಾಧಾರ ಸಂಗ್ರಹ!

ಹಾಸನ03: ಹಾಸನ ಸಂಸದ  ಪ್ರಜ್ವಲ್‌ ರೇವಣ್ಣ  ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ತೀವ್ರ ಕಾರ್ಯಾಚರಣೆಗೆ ಇಳಿದಿರುವ ವಿಶೇಷ ತನಿಖಾ ತಂಡ (SIT) ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್‌ಗಳಿಗೆ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.

ಇಂದು ಬೆಳ್ಳಂಬೆಳಿಗ್ಗೆ ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐದು ಜನರ ತಂಡದಿಂದ ಹಾಸನ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆದಿದೆ. ಮುಂಜಾನೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಇದೆ.

ನಿನ್ನೆ ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗುತ್ತಲೇ ಹಾಸನಕ್ಕೆ ಬಂದಿರುವ ಪೊಲೀಸರ ಎರಡು ತಂಡ, ಪಡುವಲಹಿಪ್ಪೆ ಸೇರಿ ಎರಡು ಕಡೆ ಸ್ಥಳ ಪರಿಶೀಲನೆ ನಡೆಸಿದೆ. ಇಂದು ಹೊಳೆನರಸೀಪುರದ ರೇವಣ್ಣ ನಿವಾಸ ಹಾಗು ಹಾಸನದ ಪ್ರಜ್ವಲ್ ನಿವಾಸದಲ್ಲೂ ಪರಿಶೀಲನೆ ನಡೆಸಿ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಕೃತ್ಯ ನಡೆದಿದೆ ಎನ್ನಲಾಗುತ್ತಿರುವ ಹಲವು ಸ್ಥಳಗಳಲ್ಲಿ ಎಸ್‌ಐಟಿ ತನಿಖೆ ನಡೆಸಬೇಕಿದೆ. ಹೀಗಾಗಿ ಹಾಸನದ ಆರ್‌ಸಿ ರಸ್ತೆಯ ಸಂಸದರ ನಿವಾಸ ಹಾಗು ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆಯ ತೋಟದ ಮನೆಯನ್ನು ಎಸ್ಐಟಿ ವಶಕ್ಕೆ ಪಡೆಯುವ ಸಂಭವ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ