ಹುಬ್ಬಳ್ಳಿ, ಸೆಪ್ಟೆಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ಘಟನೆ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದ ಗಲಭೆ ಆಗಿದೆ. ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದರು.
ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ. ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಘಟನೆಗಳು ಆಗುತ್ತಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಹೊಣೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.