LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ: ಎಐಡಿಎಸ್‌ಓ

ಬಳ್ಳಾರಿ,ಜೂ.11: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಈ ಶೈಕ್ಷಣಿಕ ವರ್ಷದಲ್ಲಿ ೨,೫೦೦ ಐಟಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರವು ಘೋಷಿಸಿದೆ. ಆದರೆ ಎಲ್ಲ ಹುದ್ದೆಗಳನ್ನು ಕೇವಲ ಕೆಪಿಎಸ್ ಶಾಲೆಗಳಿಗೆ ನೀಡಲಾಗಿದೆ. ಕೆಲವು ದಿನಗಳ ಹಿಂದಷ್ಟೇ ೧೧,೦೦೦ ಅತಿಥಿ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಈ ಹುದ್ದೆಗಳ ನೇಮಕಾತಿಯಲ್ಲೂ ಕೂಡ ಕೆಪಿಎಸ್ ಶಾಲೆಗಳಿಗೆ ಪ್ರಧಾನ ಆದ್ಯತೆ ನೀಡಲಾಗಿದೆ. ವರ್ಗಾವಣೆಯಲ್ಲೂ ಕೆಪಿಎಸ್‌ಗೆ ಪ್ರಾಶಸ್ತö್ಯ. ಈ ಮೂಲಕ ದಶಕಗಳಿಂದ ಹಳ್ಳಿಯ ಬಡ ಮಕ್ಕಳಿಗೆ ಶಿಕ್ಷಣದ ಬಾಗಿಲು ತೆರಿದಿದ್ದ ಹಳ್ಳಿಯ ಸರ್ಕಾರಿ ಶಾಲೆಗಳನ್ನು ಕಡೆಗಣಿಸಲಾಗಿದೆ. ಇತ್ತೀಚೆಗಷ್ಟೇ ಆರಂಭವಾದ ಕೆಪಿಎಸ್ ಶಾಲೆಗಳನ್ನು ಬೆಳೆಸಲಾಗುತ್ತಿದೆ. ಎಐಡಿಎಸ್‌ಓ ಬಳ್ಳಾರಿ ಜಿಲ್ಲಾ ಸಮಿತಿಯು ಖಂಡಿಸಿದೆ.
ಕೆಪಿಎಸ್‌ಗೆ ಈ ಹಳ್ಳಿಯ ಶಾಲೆಗಳ ವಿಲೀನವನ್ನು ವಿರೋಧಿಸಿ ಎಐಡಿಎಸ್‌ಓ ಹಾಗೂ ಸಾರ್ವಜನಿಕ ಶಿಕ್ಷಣ ಸಮಿತಿಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಸಾವಿರಾರು ಸರ್ಕಾರಿ ಶಾಲೆಗಳ ವಿಲೀನಕ್ಕೆ ನಾಡಿನ ಜನತೆ ತೀವ್ರ ಪ್ರತಿರೋಧವೊಡ್ಡಿದ್ದಾರೆ. ಆದರೆ ಈಗ ನೇರವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚದೇ ನೇಮಕಾತಿ ಮೊದಲುಗೊಂಡAತೆ ಸರ್ಕಾರದ ಎಲ್ಲ ಸೌಕರ್ಯಗಳನ್ನು ಕೆಪಿಎಸ್ ಶಾಲೆಗಳಿಗೇ ನೀಡುವ ಮೂಲಕ ಹಳ್ಳಿಯ ಶಾಲೆಗಳ ಕೊಲೆಗೆ ಸರ್ಕಾರ ಮುಂದಾಗಿದೆ. ಇದು ನೇರವಾಗಿ ಕತ್ತುಹಿಸುಕದೇ ಔಷಧ ಮತ್ತು ಆರೈಕೆಯನ್ನು ನಿರಾಕರಿಸಿ ರೋಗಿಯೊಬ್ಬನನ್ನು ಕೊಲ್ಲುವ ಕುಕೃತ್ಯ!!
ರಾಜ್ಯದಲ್ಲಿ ೭ ಸಾವಿರ ಏಕೋಪಾಧ್ಯಾಯ ಶಾಲೆಗಳಿವೆ. ಅಧಿಕ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಶಾಲೆಗಳಲ್ಲಿ; ಅದರಲ್ಲೂ ಕಲ್ಯಾಣ ಕರ್ನಾಟಕದ ಶಾಲೆಗಳು ಶಿಕ್ಷಕರ ತೀವ್ರ ಕೊರತೆ ಎದುರಿಸುತ್ತಿವೆ. ಸರ್ಕಾರವು ಕೂಡಲೇ ಇಂತಹ ಶಾಲೆಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಒದಗಿಸಬೇಕೆಂದು ಎಐಡಿಎಸ್‌ಓ ರಾಜ್ಯ ಸಮಿತಿಯು ಆಗ್ರಹಿಸುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆ ‘ನಮ್ಮೂರ ಶಾಲೆ ಉಳಿಸಿ' ಹೋರಾಟವನ್ನು ತೀವ್ರಗೊಳಿಸಲು ಎಐಡಿಎಸ್‌ಓ ಕರೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್