LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

೨೧ ರಂದು ನೀಟ್-೨೦೨೬ ಮರು ಪರೀಕ್ಷೆಗೆ ಸಿದ್ದತೆ : ಡಿಸಿ

ಬಾಗಲಕೋಟೆ, ಜೂನ್ ೧೭ ( : ಜಿಲ್ಲೆಯಲ್ಲಿ ಜೂನ್ ೨೧ ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ೨೦೨೬ರ ಮರು ಪರೀಕ್ಷೆಯನ್ನು ಸುಗಮ, ಪಾರದರ್ಶಕ ಹಾಗೂ ದೋಷರಹಿತವಾಗಿ ನಡೆಸಲು ಎಲ್ಲ ರೀತಿ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜರುಗಿದ ನೀಟ್ ಪರೀಕ್ಷೆ-೨೦೨೬ರ ಕುರಿತು ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಾಗಲಕೋಟೆ ಜನರದಲ್ಲಿ ೧೧ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಒಟ್ಟು ೩೯೬೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಸಿದ್ದತೆ ಮತ್ತು ಸುಗಮ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಕೇಂದ್ರಗಳ ಸಿಬ್ಬಂದಿಗಳ ಚಲನವಲನ ಗಮನಿಸಲು ಓರ್ವ ಸಿಬ್ಬಂದಿಗಳನ್ನು ನೇಮಿಸಲು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಸೌಚಾಲಯ, ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು. ಪರೀಕ್ಷಾರ್ಥಿಗಳು ಯಾವುದೇ ರೀತಿಯ ತೊಂದರೆ ತೊಂದತೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳ ಸುರಕ್ಷತೆ ಸಾಗಣೆ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಪೊಲೀಸ್ ಬಂದೋಬಸ್ತ ಹಾಗೂ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗಲೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. 
ನೀಟ್ ಮರು ಪರೀಕ್ಷೆಯು ಜೂನ್ ೨೧ ರಂದು ಮಧ್ಯಾಹ್ನ ೨ ರಿಂದ ಸಂಜೆ ೫.೧೫ರ ವರೆಗೆ ನಡೆಯಲಿದ್ದು, ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳ ಪ್ರಿಸ್ಕಿಂಗ್ ಕಾರ್ಯ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ೧೧ ಗಂಟೆಗೆ ಹಾಜರಾಗಬೇಕು. ಪ್ರಿಸ್ಕಿಂಗ್ ಸಮಂiiದಲ್ಲಿ ಎನ್.ಟಿ.ಎ ನಿಯೋಜಿಸಿರುವ ಏಜೆನ್ಸಿ ಜೊತೆಗೆ ಓರ್ವ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಅವರ ಮೂಲಕ ಪ್ರಿಸ್ಕಿಂಗ್ ಕಾರ್ಯ ನಡೆಸಬೇಕು. ಜೂನ್ ತಿಂಗಳಲ್ಲಿ ಮಳೆಗಾಲ ಇರುವದರಿಂದ ಪರೀಕ್ಷಾ ಕೇಂದ್ರದ ಕಟ್ಟಡದಲ್ಲಿ ನೀರು ಸೋರಿಕೆಯಾಗದಂತೆ ಮುಂಚಿತವಾಗಿ ತಪಾಸಣೆ ಮಾಡಲು ತಿಳಿಸಿದರು. 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ ನೀಟ್ ಮರು ಪರೀಕ್ಷೆಗೆ ೧೧ ಪರೀಕ್ಷಾ ಕೇಂದ್ರಗಳಿದ್ದು, ಪ್ರತಿಯೊಂದು ಕೇಂದ್ರಗಳಿಗೆ ೧೦ ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಗೌಪ್ಯ ಸಾಮಗ್ರಿಗಳನ್ನು ಸುರಕ್ಷಿತವಾಗಿ ನಿರ್ವಹಿಸಲು ಬ್ಯಾಂಕಿನ ಸ್ಟ್ರಾಂಗ್ ರೂಮ್‌ಗೆ ಓರ್ವ ಎ.ಎಸ್.ಐ ಮತ್ತು ೪ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜನ ಪ್ರಾಚಾರ್ಯ ಪ್ರಭಾಕರ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪರೀಕ್ಷಾ ವೀಕ್ಷಕರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್