LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ಅರಣ್ಯ ಇಲಾಖೆ ಸಿದ್ಧತೆ

ಮೈಸೂರು, ಆಗಸ್ಟ್​.12: ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಇಲಾಖೆ ಗುರುತಿಸಿದೆ

ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆಗಮಿಸಲಿದ್ದು ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆಗಮಿಸಲಿದ್ದಾರೆ.

ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ.  ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

‘ಎರಡನೇ ತಂಡದಲ್ಲಿ 5 ಆನೆಗಳಿರಲಿದ್ದು, 4 ಆನೆಗಳನ್ನು ತುರ್ತು ಸನ್ನಿವೇಶಗಳಿಗೆ ಮೀಸಲಿರಿಸಲಾಗಿದೆ. ಆ.12ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಮಾನವ – ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಅಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್