LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಾಂವಿಧಾನಿಕ ಬಿಕ್ಕಟ್ಟಿನಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ವೈಫಲ್ಯ ಎಂದು ನೇರವಾಗಿ ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ ಮತ್ತು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಈ ಕುರಿತು X ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಣಿಪುರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದು ರಾಷ್ಟ್ರಪತಿ ಆಳ್ವಿಕೆ ಹೇರಲು ಕಾರಣವಾಯಿತು ಎಂದು ಹೇಳಿದ್ದಾರೆ.

"ನರೇಂದ್ರ ಮೋದಿ ಜೀ, ಕೇಂದ್ರದಲ್ಲಿ 11 ವರ್ಷಗಳಿಂದ ಆಡಳಿತ ನಡೆಸುತ್ತಿರುವುದು ನಿಮ್ಮ ಪಕ್ಷ. ಎಂಟು ವರ್ಷಗಳಿಂದ ಮಣಿಪುರವನ್ನು ಆಳುತ್ತಿರುವುದು ನಿಮ್ಮ ಪಕ್ಷ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಬಿಜೆಪಿಯದ್ದು. ರಾಷ್ಟ್ರೀಯ ಭದ್ರತೆ ಮತ್ತು ಗಡಿ ಗಸ್ತು ಜವಾಬ್ದಾರಿ ನಿಮ್ಮ ಸರ್ಕಾರದ್ದು. ನಿಮ್ಮ ಸ್ವಂತ ಪಕ್ಷದ ಸರ್ಕಾರವನ್ನು ಅಮಾನತುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ನಿಮ್ಮ ಸರ್ಕಾರದ ವೈಫಲ್ಯವನ್ನು ನೇರ ಒಪ್ಪಿಕೊಂಡಂತಾಗಿದೆ" ಎಂದು ಖರ್ಗೆ ಹೇಳಿದರು.

ಕೇಂದ್ರ ಸರ್ಕಾರ ತಾನು ಬಯಸಿ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ, ಬದಲಾಗಿ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಇರುವುದರಿಂದ, ಯಾವುದೇ ಎನ್‌ಡಿಎ ಶಾಸಕರು "ನಿಮ್ಮ ಅಸಮರ್ಥತೆಯ ಹೊರೆಯನ್ನು"ಒಪ್ಪಿಕೊಳ್ಳಲು ಸಿದ್ಧರಿಲ್ಲದ ಕಾರಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿದ್ದೀರಿ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್