LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೆರಿಗೆಯಿಂದಾಗುವ ಸಾವುಗಳನ್ನು ತಪ್ಪಿಸಿ : ಡಿಸಿ ಸಂಗಪ್ಪ



ಬಾಗಲಕೋಟೆ, ಜುಲೈ ೦೮: ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಅತೀ ಹೆಚ್ಚು ಬಾಣಂತಿಯರ ಸಾವು ಆಗಿರುವುದು ವರದಿಯಾಗಿದ್ದು, ತಾಲೂಕು ಆರೋಗ್ಯ ಅಧಿಕಾರಿ ಸೇರಿದಂತೆ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಹೆರಿಗೆ ಸಾವುಗಳನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು. 
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಇತ್ತಿಚಿಗೆ ಜರುಗಿದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವರದಿಯಾದಂತಹ  ಹೆರಿಗೆ ಸಾವಿನ ಹೆಣ್ಣು ಮಕ್ಕಳೆಲ್ಲ ಅತೀ ಸಣ್ಣ ವಯಸ್ಸಿನವರಾಗಿದ್ದು, ಮೇಲ್ನೋಟಕ್ಕೆ ಬಾಲ್ಯವಿವಾಹಕ್ಕೆ ಒಳಗಾಗಿರಬಹುದೆಂದು ಕಂಡುಬರುತ್ತಿರುವುದರಿಂದ ಬಾಲ್ಯ ವಿವಾಹ ಕುರಿತು ಇನ್ನೂ ಹೆಚ್ಚಿನ ಜನ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಸರಿಯಾದ ತರಬೇತಿಯನ್ನು ನೀಡಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭೀಣಿ ಸ್ರೀಯರು ಆಶಾ ಕಾರ್ಯಕರ್ತೆಯರನ್ನೇ ಹೆಚ್ಚು ನಂಬುವುದರಿಂದ ಸರಿಯಾದ ಸಮಯಕ್ಕೆ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಆರೋಗ್ಯ ತಪಾಷಣೆಗೆ ಒಳಪಡಿಸುವುದು, ಔಷಧಿ ದೊರಕಿಸಿ ಕೊಡುವ ಕೆಲಸ ಮಾಡಬೇಕು. ಹೆರಿಗೆ ನೋವು ಕಾಣಿಸಿಕೊಳ್ಳುವ ಸಂದರ್ಭಗಳಲ್ಲಿ ಗರ್ಭೀಣಿ ಸ್ರ್ತೀ ಇರುವ ಅಂಬ್ಯುಲೆನ್ಸ್‌ನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಖಾಸಗಿ ಆಸ್ಪತ್ರೆಗಳಲ್ಲಿ ಸೀಜರಿನ್ ಹೆರಿಗೆ ಮಾಡಿಸಲಾಗುತ್ತದೆ ಎಂಬ ದೂರುಗಳಿದ್ದು, ಈ ಕುರಿತು ಆರೋಗ್ಯ ಅಧಿಕಾರಿಗಳು ಗಮನ ಹರಿಸಬೇಕು ಎಂದು ಎಚ್ಚರಿಸಿದರು.
ಹುಚ್ಚು ನಾಯಿ ಕಡಿತದ ಸಾವು ಹಾಗೂ ಹಾವು ಕಡಿತದಿಂದ ಸಾವು ಸಂಭವಿಸಿರುವುದು ಕೂಡ ಸಾಕಷ್ಟು ಸಂಖ್ಯೆಯಲ್ಲಿ ವರದಿಯಾಗಿದೆ. ಜಿಲ್ಲೆಯಲ್ಲಿ ಜನೇವರಿಯಿಂದ ಜೂನ್ ಮಾಹೆಯವರೆಗೆ ೧೭೧೯೬ ಹುಚ್ಚು ನಾಯಿ ಕಡಿತದ ಪ್ರಕರಣಗಳು ದಾಖಲಾಗಿ, ರೇಬೀಸ್ ನಿಂದ ೬ ಸಾವು ಸಂಭವಿಸಿರುತ್ತವೆ. ಅದೇ ರೀತಿ ಜನೇವರಿಯಿಂದ ಜೂನ್ ಮಾಹೆಯವರೆಗೆ ೩೦೯ ಹಾವು ಕಡಿತದ ಪ್ರಕರಣಳು ದಾಖಲಾಗಿ ೫ ಸಾವುಗಳು ಸಂಭವಿಸಿರುತ್ತವೆ. ಹುಚ್ಚು ನಾಯಿ ಕಡಿತ ಮತ್ತು ಹಾವು ಕಡಿತದ ಪ್ರಕರಣಗಳಿಗೆ ಸಕಾಲದಲ್ಲಿ ಲಸಿಕೆ ನೀಡುವ ಕೆಲಸವಾಗಬೇಕು ಅಲ್ಲದೇ  ಸಾರ್ವಜನಿಕರಲ್ಲಿ  ಈ ಕುರಿತು ಹೆಚ್ಚಿನ ಸಂಖ್ಯೆಯಲ್ಲಿ  ಜನ    ಜಾಗೃತಿ ಮೂಡಿಸಬೇಕು ಎಂದರು. 
ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮಂಜುನಾಥ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೇಣ್ಣನವರ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಹೇಶ ಕೋನಿ, ತಾಲೂಕು ವೈಧ್ಯಾಧಿಕಾರಿ ಡಾ. ಮಂಜುಳಾ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್