LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಲರಾಮನ ದಿನಗಳು ಚಿತ್ರಕ್ಕೆ  ಪ್ರಿಯಾ ಆನಂದ್ ನಾಯಕಿ

     ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್  ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ ಆ ದಿನಗಳು ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ  ಚಿತ್ರ 'ಬಲರಾಮನ ದಿನಗಳು'. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ. ಈ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

     ರಾಜಕುಮಾರ, ಜೇಮ್ಸ್, ಆರೆಂಜ್, ಕರಟಕ ದಮನಕದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.


     'ಬಲರಾಮನ ದಿನಗಳು' 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

     ಅಟ್ಟಕತ್ತಿ,  ಕಾಲ, ಕಬಾಲಿ, ಭೈರವ,  ದಸರಾ, ಕಲ್ಕಿ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ.


     ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌ 'ಬಲರಾಮನ ದಿನಗಳು' ಚಿತ್ರದ ಕುರಿತು ಮತ್ತಷ್ಟು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ನಿರ್ಮಾಪಕ ಶ್ರೇಯಸ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್