LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪೌರಕಾರ್ಮಿಕರ ಮಕ್ಕಳಿಗೆ ಪ್ರೊತ್ಸಾಹ ಧನ - ಶಾಸಕ ಗುಡಗುಂಟಿ

ಜಮಖಂಡಿ; ಹಗಲಿರುಳೆನ್ನದೇ ನಗರದ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರ ಮಕ್ಕಳು 10 ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ 5 ಸಾವಿರ ಹಾಗೂ ದ್ವಿತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರಥಮ 15 ಸಾವಿರ, ದ್ವಿತಿಯ 10 ಹಾಗೂ ತೃತಿಯ ಸ್ಥಾನ ಪಡೆದ ಮಕ್ಕಳಿಗೆ 5 ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡುವದಾಗಿ ಶಾಸಕ ಜಗದೀಶ ಗುಡಗುಂಟಿ ಘೊಷಣೆ ಮಾಡಿದರು, ನಗರದ ಬಸವಭವನದಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರ ಕುಟುಂದಲ್ಲಿ ಯಾರಾದರೂ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 5 ಸಾವಿರ ರೂಗಳ ಧನ ಸಹಾಯ ಮಾಡುವದಾಗಿ ತಿಳಿಸಿದರು. ಪೌರ ಕಾರ್ಮಿಕರಿಲ್ಲದ ನಗರವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಲ್ಲರೀತಿಯ ಕಸವನ್ನು ತೆಗೆದು ನಗರವನ್ನು ಸ್ವಚ್ಛವಾಗಿ ರಿಸಲು ಪ್ರತಿನಿತ್ಯ ಶ್ರಮಿಸುತ್ತಾರೆ ಅವರ ಸೇವೆ ಅಸಾಮಾನ್ಯವಾದದ್ದು ಪ್ರಧಾನಿ ಮೋದಿಯವರು ಪೌರಕಾರ್ಮಿಕರ ಪಾದ ತೊಳೆದು ಗೌರವ ಸಲ್ಲಿಸಿದ್ದಾರೆ ಪ್ರತಿಯೊಬ್ಬರೂ ಪೌರಕಾರ್ಮಿಕರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು. ಪೌರಕಾರ್ಮಿಕರಿಗೆ ಸರ್ಕಾರ ದಿಂದ ದೊರೆಯ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡುತ್ತೇನೆ. ಪೌರಕಾರ್ಮಿಕರ ಮದುವೆಗೆ 50 ಸಾವಿರ ರೂಗಳ ಸಹಾಯಧನ ನೀಡುವ ಕಾನೂನು ಇದೆ ಆದರೆ ರಾಜ್ಯಸರ್ಕಾರದ ಆರ್ಥಿಕ ಸ್ಥಿತಿ ಮುಗ್ಗರಿಸಿದ್ದು ಈ ಮೊತ್ತ ನೀಡಲಾಗಿಲ್ಲ ಎಂದು ಹೇಳಿದರು. ಪೌರಕಾರ್ಮಿಕರು ದುಶ್ಚಟಗಳಿಂದ ದೂರವಿರಬೇಕು, ಮಕ್ಕಳನ್ನು ಚನ್ನಾಗಿ ಓದಿಸಬೇಕು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಈಶ್ವರ ವಾಳೆಣ್ಣವರ ಮಾತನಾಡಿ ಪೌರಕಾರ್ಮಿಕರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು. ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ ಅವರಸೇವೆ ಇಲ್ಲದೇ ನಗರವನ್ನು ಸ್ವಚ್ಛವಾಗಿಟ್ಟು ಕೊಳ್ಳುವದು ಅಸಾಧ್ಯ ಎಂದು ಹೇಳಿದರು. ಪೌರಾಯುಕ್ತ ಜ್ಯೋತಿ ಗಿರೀಶ ಮಾತನಾಡಿ, ಕಳೆದ ಸುಮಾರು 10 ವರ್ಷಗಳಿಂದ ಪೌರಕಾರ್ಮಿಕರನ್ನು ಸರ್ಕಾರಗಳು ಗುರುತಿಸಿವೆ. ಅನೇಕ ಸೌಲಭ್ಯಗಳನ್ನು ಒದಗಿಸಿವೆ. ಗೃಹ ನಿರ್ಮಾಣಕ್ಕೆ 7.5ಲಕ್ಷ ರೂಗಳ ಧನ ಸಹಾಯವನ್ನು ನಿಡಲಾಗುತ್ತಿದ್ದು 15 ಜನರಿಗೆ ಅನುಕೂಲವಾಗಿದೆ ಹಾಗೂ ಇನ್ನೂ 4 ಜನಪೌರಕಾರ್ಮಿಕರಿಗೆ ಸರ್ಕಾರ ಗೃಹ ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಂಜೂರಾಗಿದೆ ಎಂದು ತಿಳಿಸಿದರು. ಮುರಾರ್ಜಿ ದೇಸಾಯಿ, ರಾಣಿಚೆನ್ನಮ್ಮ ವಸತಿ ಶಾಲೆಗಳಿಗೆ ಪೌರ ಕಾರ್ಮಿಕರ ಮಕ್ಕಳಿಗೆ ನೇರವಾಗಿ ದಾಖಲಾತಿ ನೀಡಲಾಗುತ್ತಿದೆ. ನಿವೇಶನ ಖರೀದಿಗೆ 2.5ಲಕ್ಷರೂಗಳ ಧನ ಸಹಾಯ, ಪೌರಕಾರ್ಮಿ ಕರಿಗೆ ಪ್ರತಿವರ್ಷ 21 ದಿನಗಳ ಬೋನಸ್‌ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ದಿಂದ ಅಧ್ಯಯನ ಪ್ರವಾಸ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು. ಪೌರಕಾರ್ಮಿಕರು ಅಸಡ್ಡೆ ವಹಿಸದೇ ನಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕೆಂದು ಮನವಿ ಮಾಡಿದರು, ಓಲೇಮಠದ ಆನಂದ ದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ನಗರಸಭೆ ಸದಸ್ಯರಾದ ಅನಸೂಯಾ ಅಸುಗಡೆ, ಪ್ರಶಾಂತಚರಕಿ, ಸುನೀಲ ಸಿಂಧೆ,ದಿಲಾವರ ಶಿರೋಳ, ಕುಶಾಲ ವಾಘಮೊರೆ, ಮುಂತಾದವರಿದ್ದರು. ಅಧಿಕಾರಿ ಕುಸುಮಾ ಸೊಪಡ್ಲ ಸ್ವಾಗತಿಸಿದರು. ಸದಸ್ಯ ಪ್ರಕಾಶ ಹಂಗರಗಿ ಕಾರ್ಯಕ್ರಮ ನಿರೂಪಿಸಿದರು. ಪೌರಾಯುಕ್ತ ಜ್ಯೋತಿಗಿರೀಶ ಪ್ರಾರ್ಥನೆ ಹಾಗೂ ವಂದನಾರ್ಪಣೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್