ಬಳ್ಳಾರಿ,ಜು.25: ನೀಟ್ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ. ಸಾಗರ್ ಬಣ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದ ಎದುರು ಪ್ರತಿಭಟನೆ ನಡೆಸಿತು.
ಪ್ರತಿಭಟನಾಕಾರರು ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ನೀಟ್ ಸೇರಿದಂತೆ ವಿವಿಧ ರಾಷ್ಟಿçÃಯ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು ಎಂದು ಒತ್ತಾಯಿಸಿದರು. ದೆಹಲಿ ಜಂತರ್ ಮಂತರ್‌ನಲ್ಲಿ ಸೋನಂ ವಾಂಗ್ಚುಕ್ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ದೇಶದ ಯುವಜನರ ಕನಸುಗಳನ್ನು ರಕ್ಷಿಸುವುದು ಸರ್ಕಾರದ ಸಂವಿಧಾನಾತ್ಮಕ ಹಾಗೂ ನೈತಿಕ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷಾ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಚಿವ ಸಂಪುಟದಿAದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಲಹೆಗಾರ ಸಿ.ನರಸಪ್ಪ, ಜಿಲ್ಲಾ ಸಂಚಾಲಕರು ಗಾದಿಲಿಂಗಪ್ಪ, ಜಿಲ್ಲಾ ಸಂಘಟನಾ ಸಂಚಾಲಕರು ಪ್ರಸಾದ್, ಕುಡುತಿನಿ ಗಿರೀಶ್, ಸಂಡೂರು ತಾಲೂಕು ಸಂಚಾಲಕರು ಸಿ ತಿಪ್ಪೇಸ್ವಾಮಿ, ಬಳ್ಳಾರಿ ಗ್ರಾಮಾಂತರ ಸಂಚಾಲಕರು ನಾಗೇಂದ್ರ, ರಾಮಕೃಷ್ಣ, ರುದ್ರ, ನಾಗರಾಜ್, ಹನುಮಂತ ರಾಮಕೃಷ್ಣ ಗೋನಾಳು ಮನೋಜ್.ಗೋನಾಳು ವೆಂಕಟೇಶ್ Ãರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.