LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ  ಶುರುವಾಗಿದೆ.


ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್