LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹಾಸ್ಟೆಲ್ ಕಾರ್ಮಿಕರಿಗೆ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ 

ಬಳ್ಳಾರಿ,ಜೂ.20.: ಎಐಯುಟಿಯುಸಿಗೆ ಸಂಯೋಜನೆಗೊAಡ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ, ೨ ತಿಂಗಳ ಬಾಕಿ ವೇತನ ಹಾಗೂ ಇನ್ನಿತರ ಬೇಡಿಕೆಗಳಿಗಾಗಿ ಒತ್ತಾಯಿಸಿ, ಹಾಸ್ಟೆಲ್ ಕಾರ್ಮಿಕರ ಪ್ರತಿಭಟನೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮುಂಭಾಗದಲ್ಲಿ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪರವರಿಗೆ ಮನವಿ ಸಲ್ಲಿಸಿ ಚರ್ಚಿಸಲಾಯಿತು. 
ಬಾಕಿಯಿರುವ ೨ ತಿಂಗಳ ವೇತನ ೨ ದಿನದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ರಾಜ್ಯದಿಂದ ಅನುದಾನ ಬಿಡುಗಡೆ ತಡವಾಗಿ ಆಗಿದೆ, ಮುಂದಿನ ದಿನಗಳಲ್ಲಿ ತಿಂಗಳ ಮೊದಲ ವಾರದಲ್ಲಿ  ವೇತನ ಬಿಡುಗಡೆಯಾಗುವಂತೆ ಕ್ರಮಕೈಗೊಳ್ಳಲಾಗುವುದು. ಕಾರ್ಮಿಕರ ಸಮಸ್ಯೆಗಳನ್ನು ಚರ್ಚಿಸಲು ಗುತ್ತಿದಾರರ ಜೊತೆ ಒಂದು ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.
ಪ್ರತಿಭಟನಾಕಾರರನ್ನು ಉದ್ದೇಶಿಸಿ, ಸಂಘದ ಜಿಲ್ಲಾಧ್ಯಕ್ಷ ಪ್ರಮೋದ್ ಮಾತನಾಡುತ್ತಾ, "ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು, ಅಡುಗೆ ಸಹಾಯಕರು, ಕಾವಾಲುಗಾರರು ನಿರಂತರವಾಗಿ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಸುವುದು, ಬಡಿಸುವುದು ಹಾಗೂ ಇನ್ನಿತರ ಅನೇಕ ಶ್ರಮದಾಯಕ ಕೆಲಸಗಳನ್ನು ಮಾಡುತಿದ್ದಾರೆ. ಇಷ್ಟೆಲ್ಲ ಶ್ರಮಿಸಿದರು ಸಮಯಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ. ಈ ಕಾರ್ಮಿಕರಿಗೆ ಏಪ್ರಿಲ್, ಮೇ ತಿಂಗಳ ವೇತನ ಬಾಕಿ ಇದೆ. ಇಲಾಖೆಯಿಂದ ಪ್ರತಿ ತಿಂಗಳು ೫ನೇ ತಾರೀಕಿನ ಒಳಗೆ ವೇತನ ನೀಡಬೇಕೆಂಬ ಆದೇಶ ಇದ್ದರೂ, ಅದು ಸರಿಯಾಗಿ ಪಾಲನೆ ಆಗುತ್ತಿಲ್ಲ. 
ಜೂನ್ ತಿಂಗಳು ಶೈಕ್ಷಣಿಕವಾಗಿ ಶಾಲೆ- ಕಾಲೇಜು ಪ್ರಾರಂಭವಾಗುವ ತಿಂಗಳು. ದುಬಾರಿ ಶಾಲಾ-ಕಾಲೇಜು ಶುಲ್ಕಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ವೆಚ್ಚ ಗಗನಕ್ಕೆರುತ್ತಿರುವ  ಈ ದಿನಗಳಲ್ಲಿ,  ದುಡಿದಿರುವ ಹಣ ೨-೩ ತಿಂಗಳು ಕೈಗೆ ಸೇರದೆ  ಹೋದರೆ,  ಜೀವನ ಹೇಗೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿದರು
ರಾಜ್ಯ ಸರ್ಕಾರವು ಮೇ ೨೨, ೨೦೨೬ ರಂದು  ಕನಿಷ್ಠ ವೇತನವನ್ನು  ಪರಿಷ್ಕರಣೆ ಮಾಡಿ, ಆದೇಶ ಮಾಡಿದೆ. ಇದರೊಂದಿಗೆ ತುಟ್ಟಿಭತ್ಯಯನ್ನು ಸೇರಿಸಿ ಜಾರಿಗೊಳಿಸಲು ಸಂಘದಿAದ ಈಗಾಲೆ ಮನವಿ ಮಾಡಲಾಗಿದೆ. ಹಾಗಾಗಿ ಪರಿಷ್ಕೃತ ವೇತನ ಕೂಡ ಜಾರಿಯಾಗಬೇಕಿದೆ" ಎಂದರು
ಜಿಲ್ಲಾ ಕಾರ್ಯದರ್ಶಿ ಸುರೇಶ್ ಮಾತನಾಡುತ್ತಾ "ಇದಲ್ಲದೆ ಈಗಿರುವ ಏಜೆನ್ಸಿಯಿಂದ ಎಲ್ಲಾ ಕಾರ್ಮಿಕರಿಗೆ ಐ.ಡಿ ಕಾರ್ಡ್, ವೇತನ ಚೀಟಿ, ನೇಮಕಾತಿ ಆದೇಶ ಪತ್ರ, ಸಮವಸ್ತç, ಕೂಡಲೇ ನೀಡಲು ಕೂಡ ಕ್ರಮವಹಿಸಬೇಕಿದೆ" ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಚೇತನ್, ಮುರಳಿ ಕೃಷ್ಣ, ಲಕ್ಷಿö್ಮÃದೇವಿ, ಪಾರ್ವತಿ, ಎರಪ್ಪ, ಸುಂದರ್, ರಾಮು ಹಾಗೂ ಕಾರ್ಮಿಕರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ