ಧಾರವಾಡ,,24 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಸಿದ ಅಮಾನುಷ ಹಲ್ಲೆ ಖಂಡಿಸಿ ಹಾಗೂ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ಜಾಗೃತ ಕರ್ನಾಟಕ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಿತು.
ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಕಾರಣರಾದವರ ಮೇಲೆ ಕ್ರಮವಾಗಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಬೇಕೆಂದು ಉಪವಾಸ ಕುಳಿತ ಪ್ರಮುಖರು ಆಗ್ರಹಿಸಿದರು.
ಈ ಧರಣಿಗೆ ಬೆಂಬಲ ಸೂಚಿಸಿದ ಧಾರವಾಡ ವಿದ್ಯಾರ್ಥಿಗಳ ಧ್ವನಿ ಸಂಘಟನೆಯು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಹೋರಾಟಗಾರಾದ ಮೋಹನ ಅಷ್ಟಗಿ, ಈಶ್ವರ ಶಿವಳ್ಳಿ ಬಸವರಾಜ ಜಾಧವ, ಲಕ್ಷ್ಮಣ ಬಕ್ಕಾಯಿ, ಕವಿತಾ ಕಬ್ಬೇರ, ವಿನಯ ಬಲೋಗಿ.ಸ್ನೇಹಾ ಧಾರವಾಡಕರ. ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.