LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಳೆ ನೀರಿನಿಂದಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ: ಈಶ್ವರ ಶಿಲ್ಲೇದಾರ

ಬೈಲಹೊಂಗಲ-ನಗರದಲ್ಲಿ ಪ್ರತಿ ಬಾರಿ ಮಳೆಯಾದಾಗಲು ನಗರದ 4 ನೇ ಹಾಗೂ 8ನೇ ವಾರ್ಡ್ ನಲ್ಲಿ ವಾಸಿಸುವ ನಿವಾಸಿಗಳ ಕಷ್ಟ ಹೇಳತೀರದಾಗಿದೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಪತ್ರಕರ್ತ, ಹೋರಾಟಗಾರ ಈಶ್ವರ ಶಿಲ್ಲೇದಾರ  ತಿಳಿಸಿದರು.
  ನಗರದಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಬಸ್ ನಿಲ್ದಾಣದ ಹಿಂಭಾಗದಲ್ಲಿನ ಹುಡೇದ ಬಾವಿ ಸುತ್ತಮುತ್ತಲಿನ ಪ್ರದೇಶ ವೀಕ್ಷಣೆಗೆ ಆಗಮಿಸಿದ್ದ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು 
ಕಳೆದ 5,6 ವರ್ಷಗಳಿಂದ ಮಳೆಗಾಲದಲ್ಲಿ 
ಸ್ಥಳೀಯರ ಸ್ಥಿತಿಯು ಚಿಂತಾಜನಕವಾಗಿದೆ. ಮೊದಲು ನಗರದ ಮೌನೇಶ್ವರ ನಗರ,ವಿದ್ಯಾನಗರದಿಂದ ಬರುವ ಮಳೆ ನೀರು ನಗರದ ದೊಡ್ಡ ಕೆರೆಯಲ್ಲಿ ಮಿಶ್ರಣವಾಗುತ್ತಿತ್ತು ಹಾಗೂ ಇನ್ನುಳಿದ ನೀರು ಬಸ್ ನಿಲ್ದಾಣದ ಹಿಂಭಾಗದಲ್ಲಿದ್ದ ಖಾಲಿ ಜಾಗೆಯಲ್ಲಿ ಇಂಗಿ ಹೋಗುತ್ತಿತ್ತು. ಆದರೆ ಪ್ರಸ್ತುತ ಕೆರೆ ಅಭಿವೃದ್ಧಿಯಿಂದಾಗಿ ಮೇಲಭಾಗದಿಂದ ಬರುವ ಮಳೆನೀರು ದೊಡ್ಡ ಕೆರೆಗೆ ಹೋಗಲು ಅನುಕೂಲ ಇಲ್ಲದಿರುವುದು ಹಾಗೂ ಬಸ್ ನಿಲ್ದಾಣದ ಹಿಂಭಾಗದಲ್ಲಿನ ಖಾಲಿ ಜಾಗೆಯಲ್ಲಿಯೂ ಸಾರಿಗೆ ಘಟಕದಿಂದ ಅಭಿವೃದ್ಧಿಗೊಂಡಿರುವ ಕಾರಣ ಮಳೆನೀರು ಸರಾಗವಾಗಿ ಇಲ್ಲಿನ ಮನೆಗಳಿಗೆ ನುಗ್ಗುತ್ತಿದೆ.
 ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿರುವುದು ಸ್ವಾಗತಾರ್ಹ ಆದರೆ ಅಭಿವೃದ್ಧಿ ಯಿಂದಾಗಿ ಬಡ ಹಾಗೂ ಮದ್ಯಮ ವರ್ಗದ ಜನರ ಜೀವನ ಚಿಂತಾಜನಕವಾಗಿದೆ. ಪ್ರತಿ ಬಾರಿ ಮಳೆಯಾದಾಗಲೂ ಕೂಡ ಇಲ್ಲಿನ ಮನೆಗಳಿಗೆ ಕಲುಷಿತ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸುವುದಲ್ಲದೇ ಮನೆಗಳಲ್ಲಿ ಉಪ ಜೀವನಕ್ಕಾಗಿ ಸಂಗ್ರಹಿಸಿ ಇಡಲಾಗಿರುವ ದಿನಬಳಕೆ ವಸ್ತುಗಳು ನೀರಲ್ಲಿ ಕೊಚ್ಚಿಹೋಗುತ್ತಿರುವ ಮನವಿದ್ರಾವಕ ಘಟನೆ ನಡೆಯುವುದಲ್ಲದೇ ಕಲುಷಿತ ನೀರಿನ ಜೊತೆಗೆ ವಿಷ ಜಂತುಗಳು ಮನೆಗಳಿಗೆ ನುಗ್ಗುತ್ತಿರುವುದರಿಂದ ಮಕ್ಕಳು,ವೃದ್ಧರ, ಗರ್ಭಿಣಿಯರ ಪಾಡೇನು ಎಂಬ ಚಿಂತೆಯಿಂದಾಗಿ ರಾತ್ರಿಯಿಡಿ ಜೀವ ಕೈಯಲ್ಲಿ ಹಿಡಿದು ಬದುಕುವ ದುಸ್ಥಿತಿ ನಿರ್ಮಾಣವಾಗಿದೆ.
ಈ ಭಾಗದಲ್ಲಿ ಮಳೆ ನೀರಿನಿಂದ ಬೇಸತ್ತು ಮೂಲಭೂತ ಸೌಕರ್ಯದಿಂದ ವಂಚಿತವಾಗಿರುವ ಇಲ್ಲಿನ ಬಡ ಹಾಗೂ ಮದ್ಯಮ ವರ್ಗದ ಜನರಿಗೆ ಶಾಶ್ವತ ಪರಿಹಾರ ಒದಗಿಸಿ ನಿರ್ಭತಿ ಯಿಂದ ಜೀವನ ಸಾಗಿಸಲು ಅನುವು ಮಾಡಿಕೊಡಬೇಕೆಂದು ತಿಳಿಸಿದರು.
    ಕೆ. ಆರ್. ಎಸ್ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಕಣಬರಗಿ ಮಾತನಾಡಿ ಸ್ಥಳೀಯ ನಿವಾಸಿಗಳು, ಯುವ ಪತ್ರಕರ್ತರು ಆಗಿರುವ ಈಶ್ವರ ಶಿಲ್ಲೇದಾರ ಎಂಬ ಯುವಕ ಈ ಭಾಗದಲ್ಲಿನ ಜನರ ಸಮಸ್ಯೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಬೇಕು.ಹಾಗೂ ಸ್ಥಳೀಯರು ಅನುಭವಿಸುತ್ತಿರುವ ನೋವನ್ನು ಸರಕಾರಕ್ಕೆ ಮುಟ್ಟಿಸಬೇಕೆಂಬ ಉದ್ದೇಶದಿಂದ ಕಲ್ಲು, ಮುಳ್ಳು, ಗಾಜಿನ ತುಂಡುಗಳ ಸಹಿತ ಪ್ರವಾಹದಂತೆ ದುಮ್ಮಿಕ್ಕಿ ಬರುತ್ತಿರುವ ಕಲುಷಿತ ನೀರಿನಲ್ಲಿ  ಸತತ ಮೂರು ಗಂಟೆಗಳ ಕಾಲ ಧರಣಿ ನಡೆಸಿ,ಕಲುಷಿತ ನೀರಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದರೂ ಕೂಡ ಯುವಕನ ಆರೋಗ್ಯದ ಕುರಿತು ಜನಪ್ರತಿನಿಧಿಗಳು ವಿಚಾರಿಸದೇ ಇರುವುದು ಅವರು ಜನರ ಮೇಲೆ ಇಟ್ಟಿರುವ ಕಾಳಜಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.
  ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ,ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ,ಬಿಜೆಪಿ ಮುಖಂಡ ವಿಜಯ ಮೆಟಗುಡ್ಡ, ತಹಸೀಲ್ದಾರ ಸದಾಶಿವ ಮಕ್ಕೋಜಿ, ನಗರಸಭೆ ಪೌರಾಯುಕ್ತರಾದ ಭಾಗ್ಯಶ್ರೀ ಹುಗ್ಗಿ,ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ,ಮಂಡಲ ಅಧ್ಯಕ್ಷ ಸುಭಾಷ್ ತುರಮರಿ,ಉಪಾಧ್ಯಕ್ಷ ಶಿವಾನಂದ ಕೋಲಕಾರ,ಬಿಜೆಪಿ ಮುಖಂಡರಾದ ಗುರು ಮೆಟಗುಡ್ಡ, ಶ್ರೀಶೈಲ ಯಡಳ್ಳಿ, ಮಡಿವಾಳಪ್ಪ ಹೋಟಿ,ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಾಮು ರಜಪೂತ, ತಾಲೂಕು ಅಧ್ಯಕ್ಷ 
ಸುಭಾಷ್ ಬಾಗೇವಾಡಿ,ಸ್ಥಳೀಯ ನಿವಾಸಿಗಳಾದ ಅಡವಯ್ಯ ಯರಗುದ್ದಿಮಠ,ಶಬ್ಬೀರ ಸಂಗೊಳ್ಳಿ,ಹುಸೇನ ರಸೂಲನವರ,ಮಾಣಿಕ್ ಹುಬ್ಬಳ್ಳಿ,ನಾಗಪ್ಪ ಕುರುಬರ, ಸೇರಿದಂತೆ ಮಹಿಳೆಯರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್