LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸ್ವಾವಲಂಬಿ ಜೀವನಕ್ಕೆ ಫಿಸಿಯೋಥೆರಪಿ ಸಹಕಾರಿ ಫಿಸಿಯೋಥೆರಪಿ ಉಪಕರಣಗಳನ್ನು ಲೋಕಾರ್ಪಣೆ


ವಿಜಯಪುರ, ಜು. 20: ಫಿಸಿಯೋಥೆರಪಿ ಉಪಕರಣಗಳು ರೋಗಿಗಳಿಗೆ ಗುಣಮಟ್ಟದ ಹಾಗೂ ಪರಿಣಾಮಕಾರಿ ಚಿಕಿತ್ಸೆ ನೀಡಲು ಹಾಗೂ ರೋಗಿಗಳಿಗೆ ಪುನರ್ವಸತಿ ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿವೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ ಜಿಲ್ಲಾ ಆಸ್ಪತ್ರೆಗೆ ಮಂಜೂರಾದ ನೂತನ ಫಿಸಿಯೋಥೆರಪಿ ಉಪಕರಣಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಜಿಲ್ಲಾ ಆಸ್ಪತ್ರೆಯು, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ ಫಿಸಿಯೋಥೆರಪಿ ಉಪಕರಣಗಳನ್ನು ಮೆದುಳಿನ ಪಾರ್ಶ್ವವಾಯು, ತಲೆಗಾಯ, ಪಾರ್ಕಿನ್ಸನ್ ಕಾಯಿಲೆ, ಇತರೆ ನರ ಸಂಬಂಧಿತ ಕಾಯಿಲೆಗಳು ಹಾಗೂ ಇತರ ನರವೈದ್ಯಕೀಯ ಸಮಸ್ಯೆಗಳಿಂದ ಬಳಲುವ ರೋಗಿಗಳಿಗೆ ಈ ಫಿಸಿಯೋಥೆರಪಿ ಉಪಕರಣಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಅರ್ಚನಾ ಕುಲಕರ್ಣಿ ಮಾತನಾಡಿ, ಉಜ್ಜೀವನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮಾರ್ಗದರ್ಶನದಿಂದ ಈ ಉಪಕರಣಗಳನ್ನು ನೀಡಿದ ಬ್ಯಾಂಕ್ ವ್ಯವಸ್ಥಾಪಕರಿಗೆ ಹಾಗೂ ಬ್ಯಾಂಕ್ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ ಅವರು, ಕರ್ನಾಟಕ ಬ್ರೇನ್ ಹೆಲ್ತ್ ಇನಿಷಿಯೇಟಿವ್‌ನ ಉದ್ದೇಶವಾದ ಮೆದುಳಿನ ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಸುಲಭವಾಗಲಿ ಎಂದು ಆಶಿಸಿದರು.
ಮೆದುಳು ಆರೋಗ್ಯ ವಿಭಾಗದಿಂದ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಸಂಯೋಜಕರಾದ ಆನಂದ ರಾಠೋಡ ಹಾಗೂ ಕ್ಲಿನಿಕಲ್ ಸೈಕೋಲಾಜಿಸ್ಟ್ ನಬೀಸಾಬ ಜೈನಾಪುರ ಅವರು, ತಲೆನೋವು, ಅಪಸ್ಮಾರ, ಬುದ್ಧಿಮಾಂದ್ಯತೆ, ಪಾರ್ಶ್ವವಾಯು ಹಾಗೂ ಇತರೆ ನರರೋಗ ಸಂಬಂಧಿತ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು.  ಟೆಲಿ-ನ್ಯೂರಾಲಜಿ, ಟೆಲಿ-ರಿಹ್ಯಾಬಿಲಿಟೇಶನ್ ಫಿಸಿಯೋಥೆರಪಿ ಸೇವೆಗಳ ಲಭ್ಯತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಜಿಲ್ಲಾಸ್ಪತ್ರೆಯ ಸ್ಥಳೀಯ ವೈದ್ಯಾಧಿಕಾರಿ ಡಾ. ಮಹೇಶ ಮೊರೆ, ಉಜ್ಜೀವನ ಸ್ಮಾಲ್ ಫೈನಾನ್ಸ್ ಬ್ಯಾಂಕಿನ ವ್ಯವಸ್ಥಾಪಕರಾದ ಆನಂದ ಜೋಗೂರ, ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿಗಳು, ಮೆದುಳು ಆರೋಗ್ಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಫಿಸಿಯೋಥೆರಪಿಸ್ಟ್ ಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  ಸಹಾಯಕ ಮಲೇರಿಯಾ ಅಧಿಕಾರಿ ವಿ. ಎಸ್. ಬಂದಿ ನಿರೂಪಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್